ಮಾಸ್ಕ್, ಸುರಕ್ಷತೆ ಅಂತರ ಪಾಲಿಸದಿದ್ದರೆ ದಂಡ: ಉಡುಪಿ ಡಿಸಿ ಜಗದೀಶ್

ಉಡುಪಿ, ಮೇ 10: ಕೊರೋನ ವೈರಸ್ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕರು, ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಕೆಲಸ ನಿರ್ವಹಿಸುವ ಸ್ಥಳಗಳಲ್ಲಿ ಮುಂಜಾಗೃತ ಕ್ರಮಗಳನ್ನು ಪಾಲಿಸಬೇಕು. ತಪ್ಪಿದಲ್ಲಿ ಡಿಸಾಸ್ಟರ್ ಮ್ಯಾನೇಜ್‌ಮೆಂಟ್ ಆ್ಯಕ್ಟ್ 2005 ಮತ್ತು ಎಪಿಡೆಮಿಕ್ ಡಿಸೀಸ್ ರೆಗ್ಯುಲೇಶನ್ ಆ್ಯಕ್ಟ್‌ನಂತೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಆದೇಶದಲ್ಲಿ ತಿಳಿಸಿದ್ದಾರೆ.

ಸಾರ್ವಜನಿಕ ಸ್ಥಳಗಳಲ್ಲಿ, ಮಾಸ್ಕ್ ಅಥವಾ ಫೇಸ್ ಕವರ್‌ಗಳನ್ನು ಧರಿಸಬೇಕು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ, ಕೆಲಸ ನಿರ್ವಹಿಸುವ ಸ್ಥಳಗಳಲ್ಲಿ, ಅಂಗಡಿಗಳಲ್ಲಿ ಖರೀದಿ ಮಾಡುವ ಸಮಯದಲ್ಲಿ ಮತ್ತು ವಾಹನಗಳಲ್ಲಿ ಸಂಚರಿಸುವ ಸಂದರ್ಭ ಒಂದು ಮೀಟರ್‌ನಷ್ಟು ಸುರಕ್ಷತೆ ಅಂತರವನ್ನು ಪಾಲಿಸಬೇಕು. ಈ ನಿಯಮ ಪಾಲಿಸದವರ ವಿರುದ್ಧ ದಂಡ ವಿಧಿಸಲು ಪೊಲೀಸ್ ಉಪ ನಿರೀಕ್ಷಕರು ಮತ್ತು ಮೇಲ್ಪಟ್ಟ ಪೊಲೀಸ್ ಅಧಿಕಾರಿಗಳು, ನಗರಸಭೆ ಪೌರಾಯುಕ್ತರು, ಆರೋಗ್ಯ ನಿರೀಕ್ಷಕರು, ಕುಂದಾಪುರ ಉಪವಿಭಾಗಾಧಿಕಾರಿಗಳು, ತಹಶೀಲ್ದಾರರು, ಪುರಸಭೆ ಮತ್ತು ಪಟ್ಟಣ ಪಂಚಾಯತ್ ಮುಖ್ಯಾಧಿ ಕಾರಿಗಳು ಮತ್ತು ಆರೋಗ್ಯ ನಿರೀಕ್ಷಕರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಅಧಿಕಾರ ನೀಡಲಾಗಿದೆ. ಈ ನಿಯಮ ಪಾಲಿಸದಿದ್ದರೆ 100ರೂ. ದಂಡ ವಿಧಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Also Read  ದಿಲ್ಲಿಯಲ್ಲಿ ತಾರಕ್ಕೇರಿದ ಹಿಂಸಾಚಾರ: ಸಾವಿನ ಸಂಖ್ಯೆ 10ಕ್ಕೇರಿಕೆ

error: Content is protected !!
Scroll to Top