ಸೌದಿ ಅರೇಬಿಯಾದಲ್ಲಿ ತಿಂಗಳ ಹಿಂದೆ ರಸ್ತೆ ಅಪಘಾತ ➤ ಗಂಭೀರ ಗಾಯಗೊಂಡು ಕೋಮಾದಲ್ಲಿದ್ದ ಸುಳ್ಯದ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಸುಳ್ಯ, ಮೇ.11. ವಾಹನ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿದ್ದ ಸುಳ್ಯದ ವ್ಯಕ್ತಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಭಾನುವಾರದಂದು ಸೌದಿ ಅರೇಬಿಯಾದಲ್ಲಿ ನಡೆದಿದೆ.

ಸೌದಿ ಅರೇಬಿಯಾದ ಅಲ್‌ – ಕೋಬಾರ್‌ ಎಂಬಲ್ಲಿ ಉದ್ಯೋಗದಲ್ಲಿದ್ದ ಸುಳ್ಯ ತಾಲೂಕಿನ ಅರಂತೋಡು ನಿವಾಸಿ ಅಬ್ದುಲ್ ಸತ್ತಾರ್ (45) ಎಂಬವರು ಸುಮಾರು ಒಂದು ತಿಂಗಳ ಹಿಂದೆ ವಾಹನ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಕೋಮಾ ಸ್ಥಿತಿಯಲ್ಲಿ ಅಲ್ಲಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಭಾನುವಾರದಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

Scroll to Top