(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.13. ದ.ಕ. ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ನಾಲ್ಕನೇ ಬಲಿಯಾಗಿದ್ದು, ಮಂಗಳೂರಿನ ಬೋಳೂರು ನಿವಾಸಿ 58 ವರ್ಷದ ಮಹಿಳೆ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ.
ಮಂಗಳೂರಿನ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಗೆ ಎಪ್ರಿಲ್ 30 ರಂದು ಕೊರೊನಾ ದೃಢಪಟ್ಟಿತ್ತು. ಮಹಿಳೆಯು ಅನಾರೋಗ್ಯದ ಹಿನ್ನೆಲೆಯಲ್ಲಿ ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಯಿಂದ ಚಿಕಿತ್ಸೆ ಪಡೆಯುತ್ತಿದ್ದರು.