ಉದ್ಯಮಿ, ಜಯಕರ್ನಾಟಕ ಸಂಸ್ಥಾಪಕ ಮುತ್ತಪ್ಪ ರೈ ಆರೋಗ್ಯದಲ್ಲಿ ಏರುಪೇರು

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.13. ಜಯಕರ್ನಾಟಕ ಸಂಘಟನೆಯ ಸಂಸ್ಥಾಪಕ ಮುತ್ತಪ್ಪ ರೈ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದ್ದು, ಪುತ್ತೂರಿನಿಂದ ಅವರ ಸಂಬಂಧಿಕರು ಬೆಂಗಳೂರಿಗೆ ತೆರಳಿದ್ದಾರೆ.

ಮಾರಕ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿರುವ ಅವರನ್ನು ಚಿಕಿತ್ಸೆಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೂಲತಃ ಪುತ್ತೂರಿನ ಕೆಯ್ಯೂರಿನವರಾದ ಎನ್.ಮುತ್ತಪ್ಪ ರೈಯವರು ಪ್ರಸ್ತುತ ಬೆಂಗಳೂರಿನ ಬಿಡದಿಯಲ್ಲಿ ವಾಸವಿದ್ದಾರೆ ಜಯ ಕರ್ನಾಟಕ ಸಂಘಟನೆಯನ್ನು ಹುಟ್ಟುಹಾಕಿ ಸಮಾಜ ಸೇವೆಗೆ ಇಳಿದಿದ್ದ ಅವರ ಆರೋಗ್ಯ ಸ್ಥಿತಿ ಗಂಭೀರವಾದ ಹಿನ್ನೆಲೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಇಡಲಾಗಿದೆ ಎಂದು ತಿಳಿದುಬಂದಿದೆ.

Also Read  ಜೀವನದಲ್ಲಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಪಡೆದುಕೊಳ್ಳಿ ಈ ವಿಧಾನವನ್ನು ಅನುಸರಿಸಿ

error: Content is protected !!
Scroll to Top