ಮಂಗಳೂರಿನಲ್ಲಿ ಕೊರೋನಾ ಸೋಂಕಿಗೆ ಐದನೇ ಬಲಿ ➤ 80 ವರ್ಷದ ವೃದ್ಧೆ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.14. ದ.ಕ. ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಐದನೇ ಬಲಿಯಾಗಿದ್ದು, ಮಂಗಳೂರಿನ ಕುಲಶೇಖರ ನಿವಾಸಿ 80 ವರ್ಷದ ಮಹಿಳೆ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ.

ಮಹಿಳೆಯು ಅನಾರೋಗ್ಯದ‌ ಹಿನ್ನೆಲೆಯಲ್ಲಿ ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಯಿಂದ ಚಿಕಿತ್ಸೆ ಪಡೆಯುತ್ತಿದ್ದರು. ಫಸ್ಟ್ ನ್ಯೂರೋ ಸಂಪರ್ಕದಿಂದ ಮಹಿಳೆಗೆ ಕೊರೋನಾ ಹರಡಿದ್ದರಿಂದ ಆ ಬಳಿಕ ಕೋವಿಡ್ 19 ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬುಧವಾರವಷ್ಟೇ 58 ವರ್ಷದ ಮಹಿಳೆಯೋರ್ವರು ಮೃತಪಟ್ಟಿದ್ದು, ಇದರೊಂದಿಗೆ ದಕ್ಷಿಣ ಕನ್ನಡದಲ್ಲಿ ಐವರ ಬಲಿಯಾಗಿದೆ.

Scroll to Top