ಮೂಡುಬಿದಿರೆ: ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

ಮೂಡುಬಿದಿರೆ, ಮೇ 14: ತಾಲೂಕಿನ ತೋಡಾರಿನಲ್ಲಿ ನಿರ್ಮಾಣ ಹಂತದ ಕಟ್ಟಡದ 5ನೇ ಮಹಡಿಯಿಂದ ಬಿದ್ದು ಕಾರ್ಮಿಕನೋರ್ವ ಮೃತಪಟ್ಟಿರುವ ಘಟನೆ ನಡೆದಿದೆ.

ಮೃತ ಯುವಕನನ್ನು ತೋಡಾರು ಪಡೀಲ್ ಬಾಕಿಯಾರು ನಿವಾಸಿ ವಿನಯ್ ಪೂಜಾರಿ (32) ಎಂದು ಗುರುತಿಸಲಾಗಿದೆ.

ಈತ ನಿರ್ಮಾಣ ಹಂತದಲ್ಲಿದ್ದ ಕಟ್ಟಡದಲ್ಲಿ ಸೆಂಟ್ರಿಂಗ್ ಕೆಲಸ ಮಾಡುತ್ತಿರುವ ವೇಳೆ, 5ನೇ ಮಹಡಿಯಿಂದ ಆಯ ತಪ್ಪಿಬಿದ್ದು ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

Scroll to Top