ಕೊರೋನಾಕ್ಕೆ ಬೆಚ್ಚಿಬಿದ್ದ ಕಡಲತಡಿ ➤ ಒಂದೇ ದಿನ ಮಂಗಳೂರಿನಲ್ಲಿ 16 ಮಂದಿಗೆ ಕೊರೋನಾ ದೃಢ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.15. ದುಬೈನಿಂದ ಮಂಗಳೂರಿಗೆ ಬಂದಿದ್ದ ಬರೋಬ್ಬರಿ 16 ಪ್ರಯಾಣಿಕರಲ್ಲಿ ಕೊರೊನಾ ವೈರಸ್​ ಇರುವುದು ದೃಢಪಟ್ಟಿದೆ.

ಪ್ರಯಾಣಿಕರನ್ನು ಪರೀಕ್ಷೆಗೊಳಪಡಿಸಿದಾಗ ಪಾಸಿಟಿವ್​ ಬಂದಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಜನತೆಯನ್ನು ಆತಂಕ ಮೂಡಿಸಿದೆ. ಎರಡು ತಿಂಗಳ ಹಿಂದೆಯಷ್ಟೇ ದುಬೈನಿಂದ ಮಂಗಳೂರಿಗೆ ಆಗಮಿಸಿದ್ದ 177 ಪ್ರಯಾಣಿಕರನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ. ಎಲ್ಲರ ಆರೋಗ್ಯ ತಪಾಸಣೆ ನಡೆಸಿದ ಬಳಿಕ ಪ್ರಯಾಣಿಕರನ್ನು ಕ್ವಾರಂಟೈನ್‍ಗೆ ಒಳಪಡಿಸಲಾಗಿತ್ತು. ಇದೀಗ 16 ಪ್ರಯಾಣಿಕರಲ್ಲಿ ಕೊರೊನಾ ವೈರಸ್​ ಇರುವುದು ದೃಢಪಟ್ಟಿದೆ.

Also Read  ಬಾಗ್ದಾದ್ ವಿಮಾನ ನಿಲ್ದಾಣದ ಮೇಲೆ ರಾಕೆಟ್ ದಾಳಿ: ಇರಾನ್ ಕಮಾಂಡರ್ ಮೇಜರ್ ಜನರಲ್ ಸಹಿತ ಎಂಟು ಮಂದಿ ಹತ್ಯೆ

error: Content is protected !!
Scroll to Top