ಖ್ಯಾತ ವೈದ್ಯ ಡಾ| ಸುಗುಣ ಗೌಡ ಮಿತ್ತಮಜಲು ನಿಧನ

(ನ್ಯೂಸ್ ಕಡಬ) newskadaba.com ಸುಳ್ಯ, ಮೇ.15. ಸುಳ್ಯದ ಖ್ಯಾತ ವೈದ್ಯರಾಗಿದ್ದ ಡಾ. ಸುಗುಣ ಗೌಡ ಮಿತ್ತಮಜಲು (75) ಇಂದು ಮುಂಜಾನೆ ಅಲ್ಪಕಾಲದ ಅಸೌಖ್ಯದಿಂದ ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಸುಳ್ಯದ ಶ್ರೀರಾಮ ಪೇಟೆಯಲ್ಲಿ ಕ್ಲಿನಿಕ್ ಹೊಂದಿದ್ದ ಅವರು ಜನಪ್ರಿಯ ವೈದ್ಯರಾಗಿದ್ದರು. ಲಯನ್ಸ್ ಕ್ಲಬ್ ನಲ್ಲಿ ಸಕ್ರಿಯರಾಗಿದ್ದ ಅವರು ಲಯನ್ ಸುಗುಣ ಗೌಡ ರೆಂದೇ ಹೆಸರು ವಾಸಿಯಾಗಿದ್ದರು. ಇತ್ತೀಚೆಗಿನ ಹಲವು ವರ್ಷಗಳಿಂದ ಸುಳ್ಯದ ಕೆವಿಜಿ ಆಸ್ಪತ್ರೆಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದ ಮೃತರು ಪುತ್ರರಾದ ಹರ್ಷವರ್ಧನ್, ವಿಷ್ಣುವರ್ಧನ್, ಪುತ್ರಿ ಗೀತಾ ದಿವಾಕರ ಸೇರ್ಕಜೆ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Also Read  ಬೆಳ್ಳಾರೆ: ವ್ಯಕ್ತಿಯೋರ್ವನ ಮೃತದೇಹ ಪತ್ತೆ

error: Content is protected !!
Scroll to Top