ಮಂಗಳೂರು, ಮೇ 15: ದುಬೈನಿಂದ ಅನಿವಾಸಿ ಕನ್ನಡಿಗರನ್ನು ಹೊತ್ತ ವಿಮಾನವು ಮೇ 18ರಂದು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದೆ ಎಂದು ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಜಿಲ್ಲಾಧಿಕಾರಿ ಪ್ರಾಥಮಿಕ ವರದಿಯ ಪ್ರಕಾರ 171 ಮಂದಿ ಪ್ರಯಾಣಿಕರು ಈ ವಿಮಾನದಲ್ಲಿ ಆಗಮಿಸಲಿದ್ದು, ಅವರೆಲ್ಲ ಯಾವ ಜಿಲ್ಲೆಗೆ ಸೇರಿದ್ದಾರೆಂದು ತಿಳಿದಿಲ್ಲ. ಆದರೆ ಕೇಂದ್ರ ಹಾಗೂ ರಾಜ್ಯ ಆರೋಗ್ಯ ಇಲಾಖೆಯ ನಿಯಮದ ಪ್ರಕಾರ ತಮ್ಮದೆ ಸ್ವಂತ ಖರ್ಚಿನಲ್ಲಿ ಕ್ವಾರಂಟೈನ್‌ಗೊಳಪಡುವ ಷರತ್ತಿಗೆ ಒಪ್ಪಿಕೊಂಡೇ ಆಗಮಿಸುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.