ಉಡುಪಿ: ಕ್ವಾರೆಂಟೈನ್‌ನಲ್ಲಿದ್ದ ವ್ಯಕ್ತಿ ಸಾವು, ಕೊರೋನ ಶಂಕೆ

ಉಡುಪಿ, ಮೇ 16: ಮಹಾರಾಷ್ಟ್ರದಿಂದ ಮೇ 5ರ ಬಳಿಕ ತನ್ನ ಹುಟ್ಟೂರಾದ ಕುಂದಾಪುರ ತಾಲೂಕಿಗೆ ಆಗಮಿಸಿದ ಕ್ವಾರಂಟೈನ್‌ನಲ್ಲಿದ್ದ 53 ವರ್ಷದ ವ್ಯಕ್ತಿಯೊಬ್ಬರು ಹೃದಯ ಸಂಬಂಧಿ ಅಸ್ವಸ್ಥತೆಗಾಗಿ ಕುಂದಾಪುರದ ಆಸ್ಪತ್ರೆಗೆ ದಾಖಲಾಗಿದ್ದು, ಬಳಿಕ ಎರಡು ದಿನಗಳ ಹಿಂದೆ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.

ಮೃತಪಟ್ಟರಿಗೆ ಕೊರೋನ ಸೋಂಕು ತಗುಲಿರಬಹುದು ಎಂಬ ಸಂಶಯದ ಹಿನ್ನೆಲೆಯಲ್ಲಿ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗಾಗಿ ಕಳುಹಿಸಲಾಗಿದ್ದು, ಅದರ ವರದಿಗಾಗಿ ಕಾಯಲಾಗುತ್ತಿದೆ.

ಮುನ್ನೆಚ್ಚರಿಕಾ ಕ್ರಮವಾಗಿ ಅವರಿಗೆ ಚಿಕಿತ್ಸೆ ನೀಡಿದ ವೈದ್ಯರು ನರ್ಸ್ ಹಾಗೂ ಆಸ್ಪತ್ರೆಯ ಸ್ವಚ್ಚತಾ ಸಿಬ್ಬಂದಿಯನ್ನು ಕ್ವಾರಂಟೈನ್‌ಗೆ ಒಳಪಡಿಸಿಲಾಗಿದೆ ಎಂದು ತಿಳಿದು ಬಂದಿದೆ.

Also Read  ಕಡಬ: 108 ಆಂಬ್ಯಲೆನ್ಸ್ ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಏಳು ತಿಂಗಳ ಗರ್ಭಿಣಿ

error: Content is protected !!
Scroll to Top