ರಾಜ್ಯದಲ್ಲಿ ಇಂದು 39 ಹೊಸ ಕೋವಿಡ್ ಪ್ರಕರಣ ಪತ್ತೆ

ಬೆಂಗಳೂರು, ಮೇ 16: ರಾಜ್ಯದಲ್ಲಿ ಶುಕ್ರವಾರ ಸಂಜೆ 5ರಿಂದ ಶನಿವಾರ ಸಂಜೆ 5ರವರೆಗೆ 36 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ರಾಜ್ಯದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ 1092ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಈ ವರೆಗೆ ಒಟ್ಟು 496 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 36ಕ್ಕೆ ಏರಿಕೆಯಾಗಿದೆ. ಇನ್ನು 559 ಪ್ರಕರಣಗಳು ಸಕ್ರಿಯವಾಗಿವೆ.

ಬೆಂಗಳೂರಿನಲ್ಲಿ 14, ಕಲಬುರಗಿ 8, ಹಾಸನ 4, ಶಿವಮೊಗ್ಗ 3, ಮಂಡ್ಯ, ಬಾಗಲಕೋಟೆ, ಉಡುಪಿ, ಬಳ್ಳಾರಿ, ಧಾರವಾಡ, ದಾವಣಗೆರೆ ಮತ್ತು ವಿಜಯಪುರದಲ್ಲಿ ತಲಾ ಒಂದೊಂದು ಹೊಸ ಪ್ರಕರಣಗಳು ಪತ್ತೆಯಾಗಿವೆ ಎಂದು ಇಲಾಖೆ ಪ್ರಕಟನೆ ತಿಳಿಸಿದೆ.

Scroll to Top