ಬೆಂಗಳೂರು, ಮೇ 17: ಸಾಮಾಜಿಕ ಅಂತರ ಕಾಯ್ದುಕೊಂಡು ಬಸ್‌ನೊಳಗೆ ಪ್ರಯಾಣ ಮಾಡಲು ಸಾಧ್ಯವಿಲ್ಲ. ಹಾಗಾಗಿ ಪೂರ್ಣ ಪ್ರಮಾಣದಲ್ಲಿ ಪ್ರಯಾಣಿಕರಿಗೆ ಸಂಚಾರ ಮಾಡಲು ಅವಕಾಶ ನೀಡಬೇಕು ಎಂದು ಕೇಂದ್ರ ರಸ್ತೆ ಸಾರಿಗೆ ಸಚಿನ ನಿತಿನ್ ಗಡ್ಕರಿ ಅವರಿಗೆ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಪತ್ರ ಬರೆದಿದ್ದಾರೆ.
ಸಾಮಾಜಿಕ ಅಂತರ ಕಾಯ್ದುಕೊಂಡು ಬಸ್‌ಗಳನ್ನು ಕಾರ್ಯಾಚರಣೆಗೆ ಇಳಿಸಬೇಕಾದರೆ ಸೀಟುಗಳ ಸಂಖ್ಯೆ ಕಡಿಮೆ ಮಾಡಬೇಕು. ಪ್ರಯಾಣಿಕರು ಪ್ರತಿನಿತ್ಯ ಹೆಚ್ಚಿನ ಸಂಖ್ಯೆಯಲ್ಲಿ ಇರುತ್ತಾರೆ. ಹೆಚ್ಚುವರಿ ಬಸ್‌ಗಳೂ ನಮ್ಮ ಬಳಿಯಿಲ್ಲ ಎಂದು ತಿಳಿಸಿದ್ದಾರೆ.
ಸಾರಿಗೆ ಸಂಸ್ಥೆಗಳ ಬಸ್ಸುಗಳ ಮೇಲೆ ನಿರ್ಬಂಧ ಹಾಕಿರುವ ಕಾರಣ ಕ್ಯಾಬ್, ಆಟೊ, ಟ್ಯಾಕ್ಸಿ ಇತ್ಯಾದಿಗಳನ್ನು ಪ್ರಯಾಣಿಕರು ನೆಚ್ಚಿಕೊಳ್ಳುತ್ತಾರೆ. ಹಾಗಾಗಿ ರಸ್ತೆಗಳಲ್ಲಿ ವಾಹನ ಸಂದಣಿ ಹೆಚ್ಚಾಗುತ್ತದೆ ಎಂದರು.
ವಾಹನಗಳಲ್ಲಿ ಚಾಲಕ ಹಾಗೂ ನಿರ್ವಾಹಕ ಮಾಸ್ಕ್ ಹಾಕಿಕೊಂಡೇ ಬಸ್ ಚಲಾಯಿಸುತ್ತಾರೆ. ಪ್ರಯಾಣಿಕರೂ ಕೂಡಾ ಮಾಸ್ಕ್ ಬಳಸಬೇಕು ಹಾಗೂ ಸ್ಯಾನಿಟೈಸರ್ ಉಪಯೋಗಿಸಬೇಕು. ಕೊರೋನ ಸೋಂಕು ಇದ್ದವರಿಗೆ ಬಸ್ಸು ಹತ್ತಲು ಅವಕಾಶ ನೀಡಲಾಗುವುದಿಲ್ಲ. ಅಲ್ಲದೇ, ಎಸಿ ಬಸ್ಸುಗಳ ಸಂಚಾರಕ್ಕೆ ಅವಕಾಶ ನೀಡುವುದು ಬೇಡ ಎಂದು ತಿಳಿಸಿದ್ದಾರೆ.