ರಾಜ್ಯದಲ್ಲಿ ಇನ್ನೆರೆಡು ದಿನ ಲಾಕ್‌ಡೌನ್ ಮುಂದುವರಿಕೆ

ಬೆಂಗಳೂರು, ಮೇ 17: ರಾಜ್ಯದಲ್ಲಿ ಇನ್ನೆರಡು ದಿನಗಳ ಕಾಲ ಲಾಕ್‌ಡೌನ್ ಮುಂದುವರಿಯಲಿದೆ. ಮೇ 19ರವರೆಗೂ ಈಗಿರುವ ಮಾರ್ಗಸೂಚಿಗಳನ್ನೇ ಅನುಸರಿಸುವಂತೆ ಕರ್ನಾಟಕ ಸರಕಾರ ಆದೇಶಿಸಿದೆ.

ಕೊರೋನ ನಿಯಂತ್ರಣಕ್ಕೆ ಸದ್ಯ ಜಾರಿಯಲ್ಲಿರುವ ಲಾಕ್‌ಡೌನ್ ಮೂರನೇ ಹಂತದಲ್ಲಿನ ಮಾರ್ಗಸೂಚಿಗಳಲ್ಲಿನ ಕ್ರಮಗಳನ್ನು ಕಡ್ಡಾಯವಾಗಿ ಮುಂದಿನ ಆದೇಶದವರೆಗೆ ಅಥವಾ ಮೇ 19ರ ಮಧ್ಯರಾತ್ರಿ 12 ಗಂಟೆಯವರೆಗೂ ಪಾಲಿಸುವಂತೆ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಕಾರ್ಯಕಾರಿ ಸಮಿತಿ ಅಧ್ಯಕ್ಷರು ಆಗಿರುವ ಸರಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ ಭಾಸ್ಕರ್ ತಿಳಿಸಿದ್ದಾರೆ.

error: Content is protected !!
Scroll to Top