ಬೆಂಗಳೂರು, ಮೇ 17: ರಾಜ್ಯದಲ್ಲಿ ಇಂದು ಹೊಸದಾಗಿ 55 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 1,147ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಮಂಡ್ಯ ಜಿಲ್ಲೆಯೊಂದರಲ್ಲೇ 22 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಕಲಬುರಗಿಯಲ್ಲಿ 10, ಹಾಸನ ಜಿಲ್ಲೆಯಲ್ಲಿ 6, ಧಾರವಾಡದಲ್ಲಿ 4, ಯಾದಗಿರಿಯಲ್ಲಿ 3, ಶಿವಮೊಗ್ಗದಲ್ಲಿ 2, ಕೋಲಾರದಲ್ಲಿ 3, ದಕ್ಷಿಣ ಕನ್ನಡದಲ್ಲಿ 2, ಉಡುಪಿಯಲ್ಲಿ 1, ವಿಜಯಪುರದಲ್ಲಿ 1 ಉತ್ತರ ಕನ್ನಡದಲ್ಲಿ 1 ಪ್ರಕರಣ ಪತ್ತೆಯಾಗಿದೆ.
Also Read ಯುವ ಜನರಿಗೆ ಕೌಶಲ್ಯಭಿವೃದ್ಧಿ ತರಬೇತಿಗಳನ್ನು ನೀಡಲು ಒತ್ತು ನೀಡಬೇಕು ➤ ಅಪರ ಜಿಲ್ಲಾಧಿಕಾರಿ ಎಮ್. ಜೆ. ರೂಪ
1,147 ಸೋಂಕಿತರ ಪೈಕಿ 497 ಮಂದಿ ಗುಣಮುಖರಾಗಿದ್ದು, 37 ಮಂದಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.