ಜೂನ್ 25 ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ➤ ಶಿಕ್ಷಣ ಸಚಿವ ಸುರೇಶ್ ಕುಮಾರ್

(ನ್ಯೂಸ್ ಕಡಬ) newskadaba.com ಬೆಂಗಳೂರು. ಮೇ.18, ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಜೂನ್ 25ರಿಂದ ಜುಲೈ 4ರ ವರೆಗೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ತಿಳಿಸಿದ್ದಾರೆ.

ಜೂನ್ 18 ರಂದು ದ್ವಿತೀಯ ಪಿಯುಸಿಯ ಇಂಗ್ಲಿಷ್‌ ಪರೀಕ್ಷೆಯು ನಡೆಯಲಿರುವುದು ಎಂದು ಅವರು ಹೇಳಿದರು. ಸೋಮವಾರ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು 2,879 ಪರೀಕ್ಷಾ ಕೇಂದ್ರಗಳಲ್ಲಿ 43,720 ಕೊಠಡಿಗಳನ್ನು ಬಳಸಲಾಗುತ್ತಿದ್ದು, ಪ್ರತೀ ಕೊಠಡಿಯಲ್ಲಿ ಸುರಕ್ಷಿತ ಅಂತರ ಕಾಯ್ದುಕೊಂಡು ಆಸನದ ವ್ಯವಸ್ಥೆ ಮಾಡಲಾಗುವುದು ಎಂದರು.

8,48,196 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಭಾರತ್ ಸ್ಕೌಟ್ಸ್, ರಾಮಕೃಷ್ಣ ಮಿಶನ್ ಅವರು ಮಾಸ್ಕ್ ನೀಡಲಿದ್ದಾರೆ. ಎಲ್ಲಾ ಕೇಂದ್ರಗಳಲ್ಲೂ ಸ್ಯಾನಿಟೈಸರ್ ಬಳಸಲಾಗುವುದು ಹಾಗೂ ಜ್ವರದ ಲಕ್ಷಣ ಇರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಯ ವ್ಯವಸ್ಥೆಯನ್ನು ಮಾಡಲಾಗುವುದು ಎಂದು ತಿಳಿಸಿದ್ದಾರೆ.

Scroll to Top