ನಾಲ್ಕು ರಾಜ್ಯದ ಜನರಿಗೆ ಪ್ರವೇಶವಿಲ್ಲ: ಬಿಎಸ್‌ವೈ

ಬೆಂಗಳೂರು, ಮೇ 18: ಕೊರೋನ ಸೋಂಕು ಹರಡುವಿಕೆ ನಿಯಂತ್ರಿಸಲು ಗುಜರಾತ್, ಮಹಾರಾಷ್ಟ್ರ, ಕೇರಳ ಮತ್ತು ತಮಿಳುನಾಡಿನಿಂದ ಬರುವ ಜನರಿಗೆ ಮೇ 31ರ ವರೆಗೆ ಅವಕಾಶವಿರುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಲಾಕ್‌ಡೌನ್ 4.0 ಜಾರಿಯಲ್ಲಿದ್ದು, ಈ ಹಂತದಲ್ಲಿ ಹೊರ ರಾಜ್ಯಗಳ ಜನರಿಗೆ ತೀರಾ ಅನಿವಾರ್ಯವಾದರೆ ಮಾತ್ರ ರಾಜ್ಯಕ್ಕೆ ಬರಲು ಅವಕಾಶ ನೀಡಲಾಗುವುದು. ಅಂತಹವರಿಗೆ ಹಂತ ಹಂತವಾಗಿ ಬಸ್ ವ್ಯವಸ್ಥೆ ಮಾಡಲಾಗುವುದು. ಹಾಗೆ ಬಂದವರನ್ನು ತಪಾಸಣೆ ಮಾಡಿ ಕಡ್ಡಾಯವಾಗಿ ಸಾಮೂಹಿಕ ಕ್ವಾರಂಟೈನ್‌ಗೆ ಒಳಪಡಿಸಲಾಗುವುದು ಎಂದು ಅವರು ಹೇಳಿದ್ದಾರೆ.

Also Read  ಶಾಲಾ ಆವರಣದಲ್ಲಿಯೇ ಶಿಕ್ಷಕಿ ಹಾಗೂ ಸಂಸ್ಥೆಯ ಅಧ್ಯಕ್ಷನ ಕಾಮಕೇಳಿ ► ರೊಮ್ಯಾನ್ಸ್ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್

ರಾಜ್ಯದ ಒಳಗೆ ರೈಲು ಸಂಚಾರಕ್ಕೆ ಅವಕಾಶ ನೀಡಲಾಗುವುದು. ಹೊರ ರಾಜ್ಯಗಳಿಗೆ ರೈಲಿನ ಓಡಾಟಕ್ಕೆ ಅವಕಾಶವಿಲ್ಲ ಎಂದೂ ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

error: Content is protected !!
Scroll to Top