(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ,ಸೆ.01, ಇಲ್ಲಿನ ಮರಕತ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ನುಗ್ಗಿದ ಕಳ್ಳರು ದೇವಿ ವಿಗ್ರಹ ಹಾಗೂ ಆಭರಣಗಳನ್ನು ಕಳವು ಮಾಡಿದ ಘಟನೆ ಶುಕ್ರವಾರದಂದು ಬೆಳಕಿಗೆ ಬಂದಿದೆ.
ಸುಬ್ರಹ್ಮಣ್ಯದ ಮರಕತ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಲ್ಲಿ ಈ ಘಟನೆ ನಡೆದಿದ್ದು, ಪ್ರಾಚೀನ ಕಾಲದ ಶ್ರೀ ದೇವಿಯ ವಿಗ್ರಹ, ಪ್ರಭಾವಳಿ, ಆಭರಣಗಳನ್ನು ದೋಚಿದ ಕಳ್ಳರು ಸುಮಾರು 10 ಲಕ್ಷದ ಅಧಿಕ ಮೌಲ್ಯದ ಸೊತ್ತುಗಳನ್ನು ಕಳ್ಳತನ ಮಾಡಿ ಪರಾರಿಯಾಗಿದ್ದಾರೆ.
ದೇವಸ್ಥಾನಕ್ಕೆ ಅಳವಡಿಸಿದ್ದ ಸಿಸಿಟಿವಿಯನ್ನು ಧ್ವಂಸಗೊಳಿಸಿದ ಬಳಿಕ ಕಳ್ಳರು ತಮ್ಮ ಕೈಚಳಕ ತೋರಿಸಿದ್ದಾರೆ. ಸ್ಥಳಕ್ಕೆ ಸುಬ್ರಹ್ಮಣ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.