ಇನ್ಮುಂದೆ ರಾಜ್ಯದೊಳಗೆ ಸಂಚರಿಸಲು ಪಾಸ್ ಅಗತ್ಯವಿಲ್ಲ ➤ ಈ ಬಗ್ಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಹೇಳಿದ್ದೇನು ಗೊತ್ತೇ..?

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.20. ದೇಶದೆಲ್ಲೆಡೆ ಲಾಕ್‍ಡೌನ್ 4.0 ಜಾರಿಯಲ್ಲಿದ್ದು, ಈ ಸಂದರ್ಭದಲ್ಲಿ ಅಂತರ್ ಜಿಲ್ಲಾ ಪ್ರಯಾಣಕ್ಕೆ ಪಾಸ್ ಅಗತ್ಯವಿಲ್ಲ ಎಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಸ್ಪಷ್ಟಪಡಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಪ್ರಯಾಣ ಮಾಡುವಾಗ ಅಗತ್ಯ ವಸ್ತುಗಳನ್ನು ಮತ್ತು ದಾಖಲೆಗಳನ್ನು ಜೊತೆಗೆ ಕೊಂಡೊಯ್ಯುವಂತೆ ಸೂಚನೆ ನೀಡಿದ್ದಾರೆ. ಇದೀಗ ಸರಕಾರವು ಬಹುತೇಕ ಚಟುವಟಿಕೆಗಳಿಗೆ ನಿರ್ಬಂಧ ಸಡಿಲಿಸಿ ಆದೇಶಿಸಿದ್ದು, ರಾಜ್ಯದೊಳಗೆ ವಾಹನ ಸಂಚಾರಕ್ಕೆ ಇನ್ನು ಮುಂದೆ ಪಾಸ್ ಅಗತ್ಯವಿಲ್ಲ ಎಂದು ಹೇಳಿದೆ.

Also Read  ಗಣೇಶ ಹಬ್ಬ ಆಚರಣೆ ಹಿನ್ನಲೆ ➤ ದುರ್ಗಂಬಿಕಾ ಅಮ್ಮನವರ ಸನ್ನಿಧಿಯಲ್ಲಿ ಗಣಹೋಮ ,ವಿಶೇಷ ಪೂಜೆ

error: Content is protected !!
Scroll to Top