ಹೊಸದಿಲ್ಲಿ, ಮೇ 21: ಅಂಫಾನ್ ಚಂಡಮಾರುತದಿಂದ ರಾಜ್ಯದಲ್ಲಿ ಸುಮಾರು 72 ಮಂದಿ ಮೃತಪಟ್ಟಿರುವುದಾಗಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ, ಚಂಡಮಾರುತದಿಂದ ಮೃತಪಟ್ಟ ಕುಟುಂಬಕ್ಕೆ 2ಲಕ್ಷ ರೂ. ಪರಿಹಾರ ಧನ ಘೋಷಿಸಲಾಗಿದೆ ಎಂದು ಅವರು ಹೇಳಿದರು. ಸ್ವಾತಂತ್ರ್ಯ ನಂತರದ ಅತೀ ಭೀಕರ ಚಂಡಮಾರುತಗಳಲ್ಲಿ ಒಂದೆನಿಸಿರುವ ಅಂಫಾನ್ ಹೊಡೆತಕ್ಕೆ ಪಶ್ಚಿಮ ಬಂಗಾಳ ಜರ್ಜರಿತಗೊಂಡಿದೆ. ಗಂಟೆಗೆ 190 ಕಿ.ಮೀ ವೇಗದಲ್ಲಿ ಬುಧವಾರ ಮಧ್ಯಾಹ್ನ 2.30ಕ್ಕೆ ಪಶ್ಚಿಮ ಬಂಗಾಳವನ್ನು ಪ್ರವೇಶಿಸಿರುವ ಅಂಫಾನ್ ಈ ವರೆಗೆ ಅಲ್ಲಿ ಭಾರಿ ಪ್ರಮಾಣದ ದಾಂಧಲೆ ಸೃಷ್ಟಿ ಮಾಡಿದೆ. ಪರಿಣಾಮವಾಗಿ 72 ಮಂದಿ ಮೃತಪಟ್ಟಿದ್ದಾರೆ.