ಬೆಂಗಳೂರು, ಮೇ 21: ರಾಜ್ಯದಲ್ಲಿ ಇಂದು ಒಂದೇ ದಿನ 143 ಮಂದಿ ಕೊರೋನ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 1,605ಕ್ಕೇರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಮುಂಬೈನಿಂದ ಆಗಮಿಸಿದ್ದವರ ಪೈಕಿ ಉಡುಪಿಯ 25 ಮಂದಿಗೆ ಸೋಂಕು ತಗುಲಿದೆ. ಬೆಂಗಳೂರು ನಗರದಲ್ಲಿ 7, ಹಾಸನದಲ್ಲಿ 19, ಮಂಡ್ಯದಲ್ಲಿ 14, ದಕ್ಷಿಣ ಕನ್ನಡದಲ್ಲಿ 5, ಚಿಕ್ಕಬಳ್ಳಾಪುರದಲ್ಲಿ 2, ದಾವಣಗೆರೆಯಲ್ಲಿ 3, ಬೆಳಗಾವಿಯಲ್ಲಿ 6, ವಿಜಯಪುರದಲ್ಲಿ 1, ಬೆಳಗಾವಿಯಲ್ಲಿ 2, ಶಿವಮೊಗ್ಗದಲ್ಲಿ 6, ಧಾರವಾಡದಲ್ಲಿ 5, ಮೈಸೂರಿನಲ್ಲಿ 1, ಉತ್ತರ ಕನ್ನಡದಲ್ಲಿ 9, ಉಡುಪಿಯಲ್ಲಿ 27, ಬಳ್ಳಾರಿಯಲ್ಲಿ 7, ತುಮಕೂರಿನಲ್ಲಿ 1 ಹಾಗೂ ಗದಗದಲ್ಲಿ ಇಬ್ಬರು ಸೇರಿದಂತೆ ಒಟ್ಟು 143 ಪ್ರಕರಣಗಳು ವರದಿಯಾಗಿವೆ. ಇಲ್ಲಿಯವರೆಗೆ ಒಟ್ಟು 570 ಜನರು ಗುಣಮುಖರಾಗಿದ್ದು, ಒಟ್ಟು 42 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ. ಇವರಲ್ಲಿ ಬಹುತೇಕರು ಮುಂಬೈಗೆ ಪ್ರಯಾಣ ಬೆಳೆಸಿದ ಹಿನ್ನೆಲೆ ಹೊಂದಿದ್ದಾರೆ. ದ.ಕ.ಕ್ಕೆ ದುಬೈಯಿಂದ ಆಗಮಿಸಿದವರಿಗೆ ಸೋಂಕು ತಗಲಿದೆ. ಉಳಿದಂತೆ ರಾಯಘಡ, ತಮಿಳುನಾಡು, ತೆಲಂಗಾಣ, ರಾಯಘಡ, ಥಾಣೆ, ಜಾರ್ಖಂಡ್, ಅಜ್ಮೀರ್ ನಿಂದ ಆಗಮಿಸಿದ್ದವರಲ್ಲಿ ಕೊರೋನ ಸೋಂಕು ಪತ್ತೆಯಾಗಿದೆ ಎಂದು ಇಲಾಖೆ ಪ್ರಕಟನೆ ತಿಳಿಸಿದೆ.