ಸಾಲುಮರದ ತಿಮ್ಮಕ್ಕ ಆಸ್ಪತ್ರೆಗೆ ದಾಖಲು

ಹಾಸನ, ಮೇ 21: ಅನಾರೋಗ್ಯದಿಂದ ಬಳುತ್ತಿದ್ದ ಪರಿಸರ ಕಾರ್ಯಕರ್ತೆ ಸಾಲುಮರದ ತಿಮ್ಮಕ್ಕ (109) ಅವರನ್ನು ನಗರದ ಮಣಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ.


ತೀವ್ರ ಹೊಟ್ಟೆ ನೋವು, ವಾಂತಿ, ಭೇದಿಯಿಂದ ಅಸ್ವಸ್ಥಗೊಂಡಿದ್ದ ಅವರನ್ನು ಗುರುವಾರ ಸಂಜೆ ಆಸ್ಪತ್ರೆಗೆ ಸೇರಿಸಲಾಗಿದ್ದು, ಜೀವಕ್ಕೆ ಅಪಾಯ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಲಾಕ್‌ಡೌನ್ ನಿರ್ಬಂಧದಿಂದ ಅವರ ದತ್ತು ಪುತ್ರ ಬಳ್ಳೂರು ಉಮೇಶ್ ಅವರ ಸ್ವಗ್ರಾಮ ಬೇಲೂರಿನ ತಾಲೂಕಿನ ಬಳ್ಳೂರು ಗ್ರಾಮದಲ್ಲಿ ಎರಡು ತಿಂಗಳಿಂದ ವಾಸವಾಗಿದ್ದರೆ.

Also Read  ಕರ್ನಾಟಕ ಪತ್ರಕರ್ತರ ಸಂಘ ಪುತ್ತೂರು ತಾಲೂಕು ಘಟಕದ ಅಧ್ಯಕ್ಷರಾಗಿ ಯೂಸುಫ್ ರೆಂಜಲಾಡಿ ಪುನರಾಯ್ಕೆ

error: Content is protected !!
Scroll to Top