ಮಧ್ಯಮ ವರ್ಗಕ್ಕೆ ಸಿಹಿ ಸುದ್ದಿ ನೀಡಿದ RBI ➤ ಇನ್ನು ಮೂರು ತಿಂಗಳ ಕಾಲ ಸಾಲದ ಕಂತು‌ ಕಟ್ಟಬೇಕಾಗಿಲ್ಲ

(ನ್ಯೂಸ್ ಕಡಬ) newskadaba.com ನವದೆಹಲಿ, ಮೇ.22. ಕೊರೋನಾ ಲಾಕ್‌ಡೌನ್ ಹಿನ್ನೆಲೆಯಲ್ಲಿ ದೇಶಾದ್ಯಂತ ಉಂಟಾಗಿರುವ ಆರ್ಥಿಕ ಬಿಕ್ಕಟ್ಟಿಗೆ ಸಂಬಂಧಿಸಿ ಕೆಲವು ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿರುವ ಭಾರತೀಯ ರಿಸರ್ವ್ ಬ್ಯಾಂಕ್ ಸಾಲದ ಮೇಲಿನ ಇಎಂಐ ಪಾವತಿದಾರರಿಗೆ ಕೊಂಚ ರಿಲ್ಯಾಕ್ಸ್ ನೀಡಿದೆ.

ಶುಕ್ರವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಆರ್ ಬಿಐ ಗವರ್ನರ್ ಶಕ್ತಿಕಾಂತ್ ದಾಸ್, ಗೃಹ ಸಾಲ, ವಾಹನ ಸಾಲ ಹಾಗೂ ವೈಯಕ್ತಿಕ ಸಾಲದ ಮೇಲಿನ ಬಡ್ಡಿದರವನ್ನು ಕಡಿತಗೊಳಿಸುವುದಾಗಿ ಘೋಷಿಸಿದ್ದಾರೆ. ಸಾಲದ ಇಎಂಐ ಮರು ಪಾವತಿಯನ್ನು ಕಳೆದ ಮಾರ್ಚ್ ನಲ್ಲಿ ಮೂರು ತಿಂಗಳ ಕಾಲ ಅಂದರೆ ಜೂನ್ 1ಕ್ಕೆ ವಿಸ್ತರಿಸಿದ್ದ ಆರ್ ಬಿಐ ಇದೀಗ ಮತ್ತೆ ಮೂರು ತಿಂಗಳು ಅಂದರೆ ಆಗಸ್ಟ್ 31ರವರೆಗೆ ವಿಸ್ತರಿಸಿದೆ. ಈ ಮೂಲಕ ಮಧ್ಯಮ ವರ್ಗವು ಸ್ವಲ್ಪ ನಿಟ್ಟುಸಿರು ಬಿಡುವಂತಾಗಿದೆ.

Also Read  ಕೊಡಗು - ಕೇರಳ ಮಳೆಹಾನಿ ಸಂತ್ರಸ್ತರಿಗೆ ನೆರವು ► ಜೇಸಿಐ ಕಡಬ ಕದಂಬ ವತಿಯಿಂದ ಸಂಗ್ರಹಿಸಲಾದ ನಗದು, ವಸ್ತುಗಳ ಹಸ್ತಾಂತರ

error: Content is protected !!
Scroll to Top