ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಚಿಕನ್ ಸೆಂಟರ್ ಹಾಗೂ ಮನೆಯಲ್ಲಿ ಅಕ್ರಮ ದನದ ಮಾಂಸ ಮಾರಾಟ ➤ ಓರ್ವನ ಬಂಧನ, ಮತ್ತೋರ್ವ ಪರಾರಿ, 23 ಕೆಜಿ ಮಾಂಸ ವಶಕ್ಕೆ – News Kadaba

ಚಿಕನ್ ಸೆಂಟರ್ ಹಾಗೂ ಮನೆಯಲ್ಲಿ ಅಕ್ರಮ ದನದ ಮಾಂಸ ಮಾರಾಟ ➤ ಓರ್ವನ ಬಂಧನ, ಮತ್ತೋರ್ವ ಪರಾರಿ, 23 ಕೆಜಿ ಮಾಂಸ ವಶಕ್ಕೆ

(ನ್ಯೂಸ್ ಕಡಬ) newskadaba.com ಕಡಬ, ಮೇ.22. ರಾಮಕುಂಜ ಗ್ರಾಮದ ನೀರಾಜೆ ಎಂಬಲ್ಲಿ ಮನೆಯೊಂದರಲ್ಲಿ ಅಕ್ರಮವಾಗಿ ಕಸಾಯಿಖಾನೆ ನಡೆಸಿ ದನದ ಮಾಂಸ ಮಾರಾಟ ಮತ್ತು ಆತೂರು ಡಿಲೈಟ್ ಚಿಕನ್ ಸೆಂಟರ್ನಲ್ಲಿ ದನದ ಮಾಂಸ ಮಾರಾಟ ಮಾಡುತ್ತಿರುವುದನ್ನು ಪತ್ತೆ ಹಚ್ಚಿದ ಕಡಬ ಪೋಲಿಸರು 23 ಕೆಜಿ ಮಾಂಸವನ್ನು ವಶಪಡಿಸಿಕೊಂಡು ಓರ್ವನನ್ನು ವಶಕ್ಕೆ ತೆಗೆದುಕೊಂಡು ಪ್ರಕರಣ ದಾಖಲಿಸಿದ ಘಟನೆ ಶುಕ್ರವಾರದಂದು ನಡೆದಿದೆ.

ರಾಮಕುಂಜ ಗ್ರಾಮದ ಆತೂರು ಡಿಲೈಟ್ ಚಿಕನ್ ಸೆಂಟರ್ ನಲ್ಲಿ ಅಕ್ರಮವಾಗಿ ದನದ ಮಾಂಸ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಕಡಬ ಪೋಲಿಸರು ಪ್ರಿಜ್ಜಲ್ಲಿರಿಸಲಾಗಿದ್ದ 9 ಕೆ.ಜಿ ಮಾಂಸವನ್ನು ವಶಪಡಿಸಿಕೊಂಡು ಮಾಲಕ ರಾಮಕುಂಜ ನಿವಾಸಿ ಮಹಮ್ಮದ್ ಬಂಧಿಸಿದ್ದಾರೆ. ಅಂಗಡಿ ಮಾಲಕರಿಗೆ ಅಕ್ರಮವಾಗಿ ದನದ ಮಾಂಸ ನೀಡುತ್ತಿದ್ದ ನೀರಾಜೆ ನಿವಾಸಿ ಸಿರಾಜ್ ಎಂಬಾತನ ಮನೆಗೆ ದಾಳಿ ನಡೆಸಿದ ಪೋಲಿಸರು ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ ಸುಮಾರು 14 ಕೆ.ಜಿ. ಮಾಂಸವನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಈ ಸಂದರ್ಭದಲ್ಲಿ ಆರೋಪಿ ಸಿರಾಜ್ ಪರಾರಿಯಾಗಿದ್ದು, ಈ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರ್ಯಾಚರಣೆಯಲ್ಲಿ ಕಡಬ ಎಸ್.ಐ.ರುಕ್ಮ ನಾಯ್ಕ್, ಸಿಬ್ಬಂದಿಗಳಾದ ಭವಿತ್ ರೈ, ಶ್ರೀಶೈಲ, ಮಹೇಶ್, ಸೋಮಯ್ಯ ಭಾಗವಹಿಸಿದ್ದರು.

Scroll to Top