ನೆಟ್ಟಣ: ಹೊಟೇಲ್ ನಲ್ಲಿ ಅಕ್ರಮವಾಗಿ ಮದ್ಯ ಮಾರಾಟ ➤ ಅಬಕಾರಿ ಅಧಿಕಾರಿಗಳಿಂದ ದಾಳಿ, ಆರೋಪಿ ಪರಾರಿ

(ನ್ಯೂಸ್ ಕಡಬ) newskadaba.com ಕಡಬ, ಮೇ.22. ಹೊಟೇಲ್ ಒಂದರಲ್ಲಿ ಅಕ್ರಮ ಮದ್ಯ ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಅಬಕಾರಿ ಇಲಾಖಾಧಿಕಾರಿಗಳು ಅಕ್ರಮ ಮದ್ಯ ಮಾರಾಟವನ್ನು ಪತ್ತೆ ಹಚ್ಚಿರುವ ಘಟನೆ ಕಡಬ ತಾಲೂಕಿನ ನೆಟ್ಟಣ ಎಂಬಲ್ಲಿ ಶುಕ್ರವಾರದಂದು ನಡೆದಿದೆ.

ನೆಟ್ಟಣ ಪೇಟೆಯಲ್ಲಿ ಕಾರ್ಯಚರಿಸುತ್ತಿರುವ ಹೋಟೆಲ್ ಅಂಬಾಡಿಯಲ್ಲಿ ಅಕ್ರಮ ಮದ್ಯ ಮಾರಾಟ ಮತ್ತು ತಂಬಾಕು ಉತ್ಪನ್ನಗಳ ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಅಬಕಾರಿ ನಿರೀಕ್ಷಕಿ ಸುಜಾತ ಮತ್ತು ಸಿಬ್ಬಂದಿಗಳು ದಾಳಿ ನಡೆಸಿ ಸುಮಾರು 2.52 ಲೀಟರ್ ಮದ್ಯವನ್ನು ವಶಕ್ಕೆ ತೆಗೆದುಕೊಂಡು ದೂರು ದಾಖಲಿಸಿಕೊಂಡಿದ್ದಾರೆ. ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಆರೋಪಿ ವಿಬಿನ್ ಎಂಬಾತ ಪರಾರಿಯಾಗಿದ್ದಾನೆ. ಅಬಕಾರಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡ ಅಬಕಾರಿ ಅಧಿಕಾರಿಗಳು ತನಿಖೆ ಮುಂದುವರೆಸಿದ್ದಾರೆ.

Also Read  ಬೆಂಗಳೂರು: ಜಾರ್ಖಂಡ್‌ನಿಂದ ಕೂಲಿ ಕೆಲಸಕ್ಕೆ ಕರೆತರಲಾಗಿದ್ದ 12 ಅಪ್ರಾಪ್ತ ಮಕ್ಕಳ ರಕ್ಷಣೆ..!!

error: Content is protected !!
Scroll to Top