ಜಮೀನಿನಲ್ಲಿ ರೈತನ ಕತ್ತು ಕೊಯ್ದು ಕೊಲೆ ► ಘಟನೆಗೆ ಕಾರಣ ನಿಗೂಢ

(ನ್ಯೂಸ್ ಕಡಬ) newskadaba.com ಮಂಡ್ಯ,ಸೆ.01, ರೈತರೊಬ್ಬರನ್ನು ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಚಿಕ್ಕೋನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಕೊಲೆಯಾದ ರೈತನನ್ನು ಚಿಕ್ಕತಿಮ್ಮಯ್ಯ (45) ಎಂದು ಗುರುತಿಸಲಾಗಿದೆ. ಚಿಕ್ಕತಿಮ್ಮಯ್ಯ ಎಂದಿನಂತೆ ಗುರುವಾರ ಕೂಡ ತನ್ನ ಜಮೀನಿನ ಬಳಿ ಕೆಲಸಕ್ಕೆ ಹೋಗಿದ್ದರು. ರಾತ್ರಿಯಾದರೂ ಮನೆಗೆ ವಾಪಸ್ ಬಂದಿರಲಿಲ್ಲ. ಇದರಿಂದ ಅನುಮಾನಗೊಂಡ ತಮ್ಮ ಮನೆಯವರು ಜಮೀನಿನ ಬಳಿ ಹೋಗಿ ಪರಿಶೀಲನೆ ನಡೆಸಿದಾಗ ರೈತ ಚಿಕ್ಕತಿಮ್ಮಯ್ಯ ಅವರನ್ನ ಕತ್ತು ಕೊಯ್ದು ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. ಕೊಲೆಗೆ ಕಾರಣವೇನು ಎಂಬುದು ತಿಳಿದು ಬಂದಿಲ್ಲ.

Also Read  ರಾಷ್ಟ್ರೀಯ ಗುಪ್ತಚರ ನಿರ್ದೇಶಕರಾಗಿ ತುಳಸಿ ಗಬ್ಬಾರ್ಡ್ ​ನೇಮಕ

ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

error: Content is protected !!
Scroll to Top