ಆಗಸ್ಟ್-ಸೆಪ್ಟೆಂಬರ್ ಒಳಗೆ ಅಂತರಾಷ್ಟ್ರೀಯ ವಿಮಾನ ಹಾರಾಟ: ಸಚಿವ ದೀಪ್ ಸಿಂಗ್ ಪುರಿ

ಹೊಸದಿಲ್ಲಿ, ಮೇ 23: ಅಂತರಾಷ್ಟ್ರೀಯ ವಿಮಾನ ಹಾರಾಟವನ್ನು ಆಗಸ್ಟ್ ಅಥವಾ ಸೆಪ್ಟೆಂಬರ್ ಒಳಗೆ ಪುನರಾರಂಭಿಸುವ ಭರವಸೆಯಿದೆ ಎಂದು ನಾಗರಿಕ ವಿಮಾನಯಾನ ಸಚಿವ ಹರ್‌ದೀಪ್ ಸಿಂಗ್ ಪುರಿ ಹೇಳಿದ್ದಾರೆ.

ಈಗಲೇ ಯಾವ ದಿನ ಅಂತರಾಷ್ಟ್ರೀಯ ವಿಮಾನ ಹಾರಾಟ ಆರಂಭವಾಗುತ್ತದೆ ಎಂದು ಖಚಿತವಾಗಿ ಹೇಳಲಾಗದು. ಪರಿಸ್ಥಿತಿಯನ್ನು ಅವಲೋಕಿಸಿ ಆರಂಭ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಮೇ 25ರಿಂದ ದೇಶೀಯ ವಿಮಾನ ಹಾರಾಟ ಪ್ರಾರಂಭಿಸಲಾಗುವುದು ಎಂದು ಮೂರು ದಿನಗಳ ಹಿಂದೆ ಅವರು ಘೋಷಣೆ ಮಾಡಿದ್ದರು.

Also Read  ಖ್ಯಾತ ನಟ, ನಿರ್ದೇಶಕ ʻಕೆ ವಿಶ್ವನಾಥ್ʼ ಇನ್ನಿಲ್ಲ

ಕೊರೋನ ವೈರಸ್ ವ್ಯಾಪಿಸುವುದನ್ನು ನಿಯಂತ್ರಿಸುವ ಸಲುವಾಗಿ ದೇಶಾದ್ಯಂತ ಲಾಕ್‌ಡೌನ್ ಘೋಷಣೆ ಮಾಡಿದ್ದ ಹಿನ್ನೆಲೆ ಮಾರ್ಚ್ 25ರಿಂದ ವಿಮಾನ ಹಾರಾಟವನ್ನು ಸ್ಥಗಿತಗೊಳಿಸಲಾಗಿತ್ತು.

error: Content is protected !!
Scroll to Top