ಶ್ರೀನಗರ: ಭಾರತೀಯ ಯೋಧರ ಗುಂಡಿಗೆ ಇಬ್ಬರು ಉಗ್ರರು ಬಲಿ

(ನ್ಯೂಸ್ ಕಡಬ)newskadaba.com ಶ್ರೀನಗರ, ಮೇ. 25, ಜಮ್ಮು-ಕಾಶ್ಮೀರ ಭದ್ರತಾ ಪಡೆಯ ಯೋಧರಿಬ್ಬರು ಭಯೋತ್ಪಾದಕರನ್ನು ಹತ್ಯೆಗೈಯ್ಯುವಲ್ಲಿ ಯಶಸ್ವಿಯಾಗಿದ್ದಾರೆ.

ಇಂದು ಮುಂಜಾನೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರನ್ನು ಹತ್ಯೆಗೈಯ್ಯಲಾಗಿದೆ ಎಂದು ಕಾಶ್ಮೀರದ ಪೊಲೀಸ್ ಮುಖ್ಯಾಧಿಕಾರಿ ವಿಜಯ್ ಕುಮಾರ್ ತಿಳಿಸಿದ್ದಾರೆ. ಜಮ್ಮು-ಕಾಶ್ಮೀರದ ಕುಲ್‌ಗಾಂ ಜಿಲ್ಲೆಯ ಮಂಜ್‌ಗಮ್ ಪ್ರದೇಶದಲ್ಲಿ ಇಂದು ಬೆಳಿಗ್ಗೆ ಗುಂಡಿನ ಚಕಮಕಿ ಆರಂಭವಾಗಿತ್ತು. ಕೇಂದ್ರ ಮೀಸಲು ಪೊಲೀಸ್ ಪಡೆ ಮತ್ತು ಕುಲ್‌ಗಮ್‌ ಪೊಲೀಸರು ಕಾರ್ಯಾಚರಣೆಯಲ್ಲಿ ತೊಡಗಿದ್ದರು.

 

error: Content is protected !!
Scroll to Top