ಇನ್ನು ಮುಂದೆ ತೀರ್ಥ ಯಾತ್ರೆಗೂ ಆಧಾರ್ ಕಡ್ಡಾಯ ►ಯಾಕೆ ಅಂತಿರಾ…???

(ನ್ಯೂಸ್ ಕಡಬ) newskadaba.com ಬೆಂಗಳೂರು,ಸೆ.01, ಇನ್ನು ಮುಂದೆ ತೀರ್ಥ ಯಾತ್ರೆಗೆ ತೆರಳುವ ಯಾತ್ರಿಗಳಿಗೆ ಕರ್ನಾಟಕ ಸರ್ಕಾರ ಆಧಾರ್ ಕಾರ್ಡ್ ಕಡ್ಡಾಯಗೊಳಿಸಿದೆ.

ಉತ್ತರಾಖಂಡ್‍ನ ಬದ್ರಿನಾಥ್, ಕೇದಾರ್‍ನಾಥ್, ಗಂಗೋತ್ರಿ ಮತ್ತು ಯಮುನೋತ್ರಿ ತೀರ್ಥ ಯಾತ್ರೆಗೆ ಹೋಗುವ ಯಾತ್ರಿಗಳಿಗೆ ನೀಡಲಾಗುವ 20,000 ರೂ. ಸಹಾಯಧನದ ದುರ್ಬಳಕೆಯನ್ನು ತಡೆಗಟ್ಟುವ ಉದ್ದೇಶದೊಂದಿಗೆ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಸರ್ಕಾರ ತಿಳಿಸಿದೆ.

ಆಗಸ್ಟ್ 17 ರಂದು ಚಾರ್ ಧಾಮ್ ಯಾತ್ರಿಗಳಿಗೆ ನೀಡಲಾಗುವ ಸಬ್ಸಿಡಿ ಬಗ್ಗೆ ಮಾರ್ಗಸೂಚಿಯನ್ನು ಸರ್ಕಾರ ಬಿಡುಗಡೆಗೊಳಿಸಿದ್ದು, ಮಾರ್ಗಸೂಚಿಯಲ್ಲಿ ಆಧಾರ್ ಕಾರ್ಡ್ ಕಡ್ಡಾಯಗೊಳಿಸಿರುವ ಅಂಶವನ್ನು ಸೇರಿಸಲಾಗಿದೆ.

ಪ್ರತಿ ವರ್ಷ 1000-1500 ರಾಜ್ಯದ ನಿವಾಸಿಗಳು ಸಬ್ಸಿಡಿ ಪಡೆದುಕೊಳುತ್ತಿದ್ದಾರೆ. ಆದರೆ ಈ ವರ್ಷ ಯಾತ್ರಿಕರ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿರುವುದರಿಂದ ಸಬ್ಸಿಡಿಯ ಹಣದ ದುರ್ಬಳಕೆಯನ್ನು ತಡೆಗಟ್ಟಲು ಆಧಾರ್ ಕಾರ್ಡ್ ಕಡ್ಡಾಯಗೊಳಿಸಲಾಗಿದೆ ಎಂದು ಮುಜರಾಯಿ ಇಲಾಖೆಯ ಹಿರಿಯ ಅಧಿಕಾರಿ ಹೇಳಿದ್ದಾರೆ.

Also Read  ದಕ್ಷಿಣ ಕನ್ನಡ: ಗಣೇಶ ಚತುರ್ಥಿ ಪ್ರಯುಕ್ತ ಸೆ.19 ರಂದು ರಜೆ ನೀಡಲು ಸಚಿವರ ಸೂಚನೆ

2014ರಲ್ಲಿ ಸಿದ್ದರಾಮಯ್ಯ ಸರ್ಕಾರ ರಾಜ್ಯದ ಮಧ್ಯಮ ವರ್ಗ ಮತ್ತು ಬಡವರಿಗೆ ಸಹಾಯವಾಗಲೆಂದು ಈ ಸಬ್ಸಿಡಿಯನ್ನು ತಂದಿತ್ತು. ಈ ಹಿಂದೆ ಬಿಜೆಪಿ ಸರ್ಕಾರ ಮಾನಸ ಸರೋವರ ಯಾತ್ರಿಗಳಿಗೆ 30,000 ಸಬ್ಸಿಡಿಯನ್ನು ಘೋಷಿಸಿತ್ತು.

error: Content is protected !!
Scroll to Top