(ನ್ಯೂಸ್ ಕಡಬ) newskadaba.com ನವದೆಹಲಿ, ಮೇ26: ಲಾಕ್ ಡೌನ್ ಜಾರಿಯಲ್ಲಿದ್ದರೂ ಭಾರತದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಈಗಾಗಲೆ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆ ಕಂಡಿದ್ದು, ವೈರಾಣು ಕೇಸುಗಳಿರುವ ಪಟ್ಟಿಯಲ್ಲಿ ಭಾರತ 10ನೇ ಸ್ಥಾನದಲ್ಲಿದೆ. ಇದರ ಎಫೆಕ್ಟ್ ಶಾಲಾ ಕಾಲೇಜುಗಳ ಮೇಲೂ ಬೀರಿದೆ.
ಮಾರ್ಚ್ 16ನೇ ತಾರೀಕಿನಿಂದಲೇ ದೇಶದಾದ್ಯಂತ ಎಲ್ಲಾ ಶಾಲಾ ಕಾಲೇಜುಗಳನ್ನ ಮುಚ್ಚಲಾಗಿದೆ. ಇದಕ್ಕೆ ಸಂಬಂಧ ಪಟ್ಟಂತೆ ದೇಶಾದ್ಯಂತ ಜುಲಾಯಿನಿಂದಲೇ ಶಾಲೆಗಳನ್ನು ಪುನರಾರಂಭ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಶಿಕ್ಷಣ ಸಮಿತಿಯೊಂದು ಶಿಫಾರಸ್ಸು ಮಾಡಿದೆ. ಮೊದಲು ಹಸಿರು, ಕಿತ್ತಲೆ ಝೋನ್ ಗಳಿರುವ ಜಿಲ್ಲೆಗಳಲ್ಲಿ ಶಾಲೆ ಆರಂಭ ಮಾಡಲಾಗುವುದು, ನಂತರ ಪರಿಸ್ಥಿತಿ ಸುಧಾರಿಸಿದ ಬಳಿಕ ಕೆಂಪು ವಲಯಕ್ಕೆ ಅವಕಾಶ ನೀಡಲಾಗುವುದು, ಕಿರಿಯ ಮಕ್ಕಳು ಮಾತ್ರ ಮನೆಯಲ್ಲಿಯೇ ಅಧ್ಯಯನ ಮುಂದುವರಿಸಲು ಸೂಚಿಸುವ ಸಾಧ್ಯತೆ ಇದೆ.