ಭೀಕರ ರಸ್ತೆ ಅಪಘಾತ ►ಜಂಪ್ ಮಾಡಿದ ಸ್ಕಾರ್ಪಿಯೋ ಇನ್ನೊಂದು ರಸ್ತೆಯಲ್ಲಿ ಬರುತ್ತಿದ್ದ ಲಾರಿಗೆ ಢಿಕ್ಕಿ ► ಇಬ್ಬರ ದುರ್ಮರಣ

(ನ್ಯೂಸ್ ಕಡಬ) newskadaba.com ಕಡಬ,ಸೆ.01, ಬೆಂಗಳೂರು: ಸ್ಕಾರ್ಪಿಯೋ ಹಾಗೂ ಕ್ಯಾಂಟರ್ ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟು, ಮೂವರು ಗಂಭೀರ ಗಾಯಗೊಂಡ ಘಟನೆ ಬೆಂಗಳೂರು ಏರ್‍ ಪೋರ್ಟ್ ಬಳಿ ಶುಕ್ರವಾರ ಮಧ್ಯಾಹ್ನ ವರದಿಯಾಗಿದೆ.

ಮೃತರನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಅಶ್ವತ್ ಬಾಬು ಹಾಗೂ ರಾಜು ಎಂಬುವುದಾಗಿ ಗುರುತಿಸಲಾಗಿದ್ದು.

ಬೆಂಗಳೂರು ಏರ್‍ ಪೋರ್ಟ್ ಕಡೆಯಿಂದ ಬರುತ್ತಿದ್ದ ಸ್ಕಾರ್ಪಿಯೋ ಹುಣಸಮಾರನಹಳ್ಳಿ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್ ಗೆ ಢಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಇನ್ನೊಂದು ರಸ್ತೆಗೆ ಹಾರಿದ ಸ್ಕಾರ್ಪಿಯೋ, ಎದುರುಗಡೆಯಿಂದ ಬರುತ್ತಿದ್ದ ಲಾರಿಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಕಾರ್ಪಿಯೋ ಕಾರ್ ಸಂಪೂರ್ಣ ಜಖಂ ಆಗಿದ್ದು, ಕಾರ್ ನ ಮುಂಭಾಗದಲ್ಲಿ ಕುಳಿತಿದ್ದ ಇಬ್ಬರೂ ಸ್ಥಳದಲ್ಲೇ ಮೃತಪಟ್ಟು, ಹಿಂಬದಿ ಕುಳಿತಿದ್ದ ಮೂವರಿಗೆ ಕೂಡ ಗಂಭೀರ ಗಾಯಗಳಾಗಿದೆ. ತಕ್ಷಣವೇ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

Also Read  50% ರಿಯಾಯಿತಿ ದರದಲ್ಲಿ ಪುಸ್ತಕಗಳ ಮಾರಾಟ

ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಮೃತದೇಹಗಳನ್ನು ಹೊರತೆಗೆಯುವಲ್ಲಿ ಪೊಲೀಸರು ಹಾಗೂ ಸಾರ್ವಜನಿಕರು ಹರಸಾಹಸಪಟ್ಟರು. ಸದ್ಯ ಇಬ್ಬರು ಮೃತದೇಹಗಳನ್ನು ಯಲಹಂಕ ಸರ್ಕಾರಿ ಆಸ್ಪತ್ರೆಯ್ಲಲಿರೋ ಶವಾಗಾರಕ್ಕೆ ರವಾನಿಸಲಾಗಿದೆ.

ನಜ್ಜುಗುಜ್ಜಾದ ಕಾರನ್ನು ಕ್ರೇನ್ ಮೂಲಕ ಬೇರೆಡೆ ಸ್ಥಳಾಂತರಿಸಲಾಗಿದೆ. ಭಾಷಾ ಅನ್ನೊರಿಗೆ ಸೇರಿದ ಕ್ಯಾಂಟರ್ ಲಾರಿಯನ್ನು ಬ್ಲೂಡಾರ್ಟ್ ಕಂಪನಿಗೆ ಗಾಡಿ ಅಟೆಚ್ ಮಾಡಿದ್ದರು ಎಂಬುವುದಾಗಿ ತಿಳಿದುಬಂದಿದೆ.

error: Content is protected !!
Scroll to Top