(ನ್ಯೂಸ್ ಕಡಬ) newskadaba.com ಬೆಂಗಳೂರು ಮೇ26: ರಾಜ್ಯದಲ್ಲಿ ಕೊರೋನಾ ಕೇಸ್ ಹೆಚ್ಚುತ್ತಿರುವ ಹಿನ್ನಲೆಯಲ್ಲಿ SSLC
ಪರೀಕ್ಷೆ ನಡೆಸದಂತೆ ಕನ್ನಡ ಅಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಪ್ರೊ.ಜಿ. ಸಿದ್ದರಾಮಯ್ಯನವರು ಸೇರಿದಂತೆ ವಿವಿಧ ಗಣ್ಯರು ಸಿಎಂ ಬಿ.ಎಸ್ ಯಡಿಯೂರಪ್ಪನವರಿಗೆ ಮನವಿ ಮಾಡಿಕೊಂಡಿದ್ದಾರೆ.
ಸುಮಾರು 15 ಪ್ರಮುಖ ಸಂಘಟನೆಗಳ ಮುಖಂಡರ ಸಹಿ ಹೊಂದಿರುವ ಪತ್ರವೊಂದನ್ನು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರಿಗೆ ಕಳುಹಿಸಲಾಗಿದ್ದು, ಇದರಲ್ಲಿ ಮುಖ್ಯವಾಗಿ SSLC ಪರೀಕ್ಷಾ ಕೇಂದ್ರಕ್ಕೆ ಮಕ್ಕಳನ್ನು ಹೇಗೆ ಕಳುಹಿಸುವುದು ಎಂಬ ಆತಂಕ ಪಾಲಕರಲ್ಲಿದೆ. ಇನ್ನು ಕೊರೋನಾ ಭೀತಿಯ ನಡುವೆ ಪರೀಕ್ಷೆ ನಡೆಸುವುದು ಅನಿವಾರ್ಯವೇ? ಈ ಸಮಯದಲ್ಲಿ ಅಷ್ಟೊಂದು ಸಮಂಜಸವೇ? ಈ ಪರೀಕ್ಷೆ ಮಕ್ಕಳಿಗೆ ಜೀವಕ್ಕಿಂತ ಮುಖ್ಯವೇ ಎಂದು ಪ್ರಶ್ನಿಸಲಾಗಿದೆ. ಅಖಿಲ ಭಾರತ ವಿದ್ಯಾರ್ಥಿ ಫೆಡರೇಷನ್, ಫ್ರಾಥಮಿಕ ಶಿಕ್ಷಕರ ಫೆಡರೇಷನ್, ಕರ್ನಾಟಕ ರಾಜ್ಯ ನಿವೃತ್ತಶಿಕ್ಷಣ ಅಧಿಕಾರಿಗಳ ವೇದಿಕೆ ಸೇರಿದಂತೆ 15ಕ್ಕೂ ಹೆಚ್ಚಿನ ಸಂಘಟನೆಗಳ ಮುಖ್ಯಸ್ಥರು ಈ ಪತ್ರಕ್ಕೆ ಸಹಿ ಹಾಕಿದ್ದಾರೆ.