ರಾಜ್ಯ ಸಚಿವ ಸಂಪುಟಕ್ಕೆ ಮೇಜರ್ ಸರ್ಜರಿಗೆ ನಿರ್ಧಾರ!

ಬೆಂಗಳೂರು, ಮೇ 26: ಬಿ.ಎಸ್.ಯಡಿಯೂರಪ್ಪ ನೇತೃತ್ವದ ರಾಜ್ಯ ಸಚಿವ ಸಂಪುಟಕ್ಕೆ ಭರ್ಜರಿ ಸರ್ಜರಿ ನಡೆಸಲು ಬಿಜೆಪಿ ವರಿಷ್ಟರು ಮುಂದಾಗಿದ್ದಾರೆ. ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡದ ಸಚಿವರನ್ನು ಕೈಬಿಟ್ಟು, ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುತ್ತಿರುವವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ವರಿಷ್ಠರು ಆಲೋಚಿಸಿದ್ದಾರೆ.

ಇನ್ನೂ ಕೆಲವು ಸಚಿವರ ಕಾರ್ಯಕ್ಷಮತೆ ಆಧರಿಸಿ ಖಾತೆ ಬದಲಾವಣೆ ಮಾಡಲಾಗುವುದು ಎಂದು ಬಿಜೆಪಿ ಮೂಲಗಳು ಹೇಳಿವೆ. ಉತ್ತಮವಾಗಿ ಕೆಲಸ ನಿರ್ವಹಿಸಿದವರಿಗೆ ಉತ್ತಮ ಖಾತೆ. ಈವರೆಗೆ ತಮ್ಮ ಕೆಲಸದಲ್ಲಿ ಕಳಪೆ ನಿರ್ವಹಣೆ ಮಾಡಿರುವ ಸಚಿವರಿಗೆ ಕೋಕ್ ನೀಡಲಿದ್ದು, ಹೊಸಬರಿಗೆ ಸಂಪುಟದಲ್ಲಿ ಆದ್ಯತೆ ನೀಡಲು ಅಲೋಚನೆ ಮಾಡಲಾಗಿದೆ ಎಂದು ಹೇಳಲಾಗಿದೆ. ಆಪರೇಷನ್ ಕಮಲದಿಂದ ಸರಕಾರ ರಚನೆಗೆ ಸಾಥ್ ಕೊಟ್ಟವರಿಗೆ ಮೊದಲ ಆದ್ಯತೆ ಜೊತೆಗೆ ಬಿಜೆಪಿಯ 8ರಿಂದ 10 ಹೊಸ ಶಾಸಕರಿಗೂ ಸಚಿವ ಸ್ಥಾನ ನೀಡುವ ಬಗ್ಗೆ ಬಿಸಿ, ಬಿಸಿ ಚರ್ಚೆ ನಡೆಯುತ್ತಿದೆ. ವಿಧಾನ ಪರಿಷತ್ ಚುನಾವಣೆ, ನಾಮ ನಿರ್ದೇಶನ ಬಳಿಕ ಸಂಪುಟ ವಿಸ್ತರಣೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಮತ್ತು ಕೇಂದ್ರದ ಬಿಜೆಪಿ ವರಿಷ್ಠರು ಕೈಹಾಕಲಿದ್ದಾರೆ ಎಂದು ಹೇಳಲಾಗುತ್ತಿದೆ.

Also Read  ಉಪ್ಪಿನಂಗಡಿ ಸೇರಿದಂತೆ ಜಿಲ್ಲೆಯ ಏಳು ಗ್ರಾಮಗಳು ಸೀಲ್ ಡೌನ್..!! ➤ ಇನ್ಸಿಡೆಂಟ್‌ ಕಮಾಂಡರ್ ನೇಮಕಗೊಳಿಸಿ ದ.ಕ. ಜಿಲ್ಲಾಧಿಕಾರಿ ಆದೇಶ

ಈಗ ಲಭ್ಯವಾಗಿರುವ ಮಾಹಿತಿಯ ಪ್ರಕಾರ ಡಿಸಿಎಂ ಅಶ್ವಥ್ ನಾರಾಯಣ್, ಕೆ.ಎಸ್.ಈಶ್ವರಪ್ಪ, ಜಗದೀಶ್ ಶೆಟ್ಟರ್, ಸಿ.ಸಿ.ಪಾಟೀಲ್, ಕೋಟ ಶ್ರೀನಿವಾಸ ಪೂಜಾರಿ, ಶೆಶಿಕಲಾ ಜೊಲ್ಲೆ ಅವರುಗಳಿಗೆ ಕೊಕ್ ಕೊಡುವ ಸಾಧ್ಯತೆ ದಟ್ಟವಾಗಿದೆ ಎಂದು ಹೇಳಲಾಗುತ್ತಿದೆ. ಅರವಿಂದ ಲಿಂಬಾವಳಿ, ಉಮೇಶ್ ಕತ್ತಿ, ಹಾಲಾಡಿ ಶ್ರೀನಿವಾಸ ಶೆಟ್ಟಿ, ಕಾರ್ಕಳದ ಸುನೀಲ್ ಕುಮಾರ್, ಮುರುಗೇಶ್ ನಿರಾಣಿಗೆ ಸಂಪುಟದಲ್ಲಿ ಅವಕಾಶ ಮಾಡಿಕೊಡುವ ಸಾಧ್ಯತೆ ಬಹಳವಾಗಿದೆ. ಇತ್ತೀಚೆಗೆ ಬಹಳ ವಿವಾದಕ್ಕೆ ಗುರಿಯಾಗಿರುವ ಸಚಿವ ಜೆ.ಸಿ. ಮಾಧುಸ್ವಾಮಿ ಹಾಗೂ ಡಾ.ಸುಧಾಕರ್, ಡಿಸಿಎಂ ಲಕ್ಷ್ಮಣ ಸವದಿ, ಆರ್.ಅಶೋಕ್, ಸುರೇಶ್ ಕುಮಾರ್, ಸೇರಿದಂತೆ ಕೆಲವು ಸಚಿವರ ಖಾತೆಗಳು ಬದಲಾವಣೆ ಆಗಲಿದೆ ಎಂದು ಹೇಳಲಾಗುತ್ತಿದೆ. ಇನ್ನು ಬಿಜೆಪಿ ಸರಕಾರ ಅಧಿಕಾರಕ್ಕೆ ಬರಲು ಶಾಸಕ ಸ್ಥಾನ ತ್ಯಾಗ ಮಾಡಿ ನಂತರ ಚುನಾವಣೆಯಲ್ಲಿ ಸೋತಿರುವ ಎಚ್. ವಿಶ್ವನಾಥ್, ಹೊಸಕೋಟೆಯ ಮಾಜಿ ಶಾಸಕ ಎಂಟಿಬಿ ನಾಗರಾಜ್ ಅವರಿಗೂ ಸಂಪುಟದಲ್ಲಿ ಅವಕಾಶ ಮಾಡಿಕೊಡಲು ತೀರ್ಮಾನ ಮಾಡಲಾಗಿದೆ. ಅದಕ್ಕೆ ಮೊದಲು ಅವರುಗಳನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಬೇಕಿದ್ದು. ವರಿಷ್ಟರು ಇತ್ತ ಕಡೆ ಸಹ ಗಮನ ಹರಿಸಲು ಮುಂದಾಗಿದ್ದಾರೆ ಎನ್ನಲಾಗಿದೆ.

Also Read  ಬೀಡಿ, ಗಣಿ, ಸಿನೆಮಾ ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನಕ್ಕೆ ಅರ್ಜಿಆಹ್ವಾನ

error: Content is protected !!
Scroll to Top