ಪಲ್ಟಿ ಹೊಡೆದ ಟೆಂಪೋ

(ನ್ಯೂಸ್ ಕಡಬ) newskadaba.com ಕಡಬ, ಮೇ.27. ಉಡುಪಿ: ಶಿವಮೊಗ್ಗದಿಂದ ಮಂಗಳೂರು ಕಡೆ ಬಾಳೆಹಣ್ಣು ತುಂಬಿಸಿಕೊಂಡು ಸಾಗುತ್ತಿದ್ದ ಪಿಕ್ಆಪ್ ವಾಹನವೊಂದು ಹೆದ್ದಾರಿ ಮದ್ಯೆ ಪಲ್ಟಿ ಹೊಡೆದು ಮತ್ತೊಂದು ವಾಹನಕ್ಕೆ ಢಿಕ್ಕಿ ಹೊಡೆದ ಘಟನೆ ರಾ.ಹೆ. 66 ರ ಮೂಳೂರು ಸರ್ವೇಶ್ವರ ಬಬ್ಬರ್ಯ ಕೊಡಮಣಿತ್ತಾಯ ದೇವಸ್ಥಾನದ ಬಳಿ ಬುಧವಾರ ಮುಂಜಾನೆ ನಡೆದಿದೆ.

ಮಂಗಳೂರಿಗೆ ತೆರಳುತ್ತಿದ್ದ ಮಿನಿ ಟೆಂಫೋ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಹಿಂಬದಿಯಲ್ಲಿ ಮೀನು ತುಂಬಿಸಿಕೊಂಡು ಕಿನ್ನಿಗೋಳಿ ಕಡೆಗೆ ಸಾಗುತ್ತಿದ್ದ ವಾಹನ ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ.

Also Read  ಪ್ರಾಮಾಣಿಕ ಚಾಲಕರಿಗೆ ಪುರಸ್ಕಾರ- ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ಘಟನೆಯಲ್ಲಿ ಬಾಳೆಹಣ್ಣು ವಾಹನದ ಚಾಲಕನಿಗೆ ಸಣ್ಣ ಪುಟ್ಟ ಗಾಯವಾಗಿದೆ. ಕಾಪು ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸಂಚಾರ ಸುಗಮಗೊಳಿಸಿದ್ದಾರೆ.

error: Content is protected !!
Scroll to Top