ಉಡುಪಿ: ಇಂದು 9 ಮಂದಿಗೆ ಕೊರೋನ ದೃಢ

(ನ್ಯೂಸ್ ಕಡಬ) newskadaba.com ಉಡುಪಿ, ಮೇ. 27, ಜಿಲ್ಲೆಯಲ್ಲಿ ಇಂದು 9 ಮಂದಿಯಲ್ಲಿ ಕೊರೋನ ವೈರಸ್ ಸೋಂಕು ಇರುವುದು ದೃಢಪಟ್ಟಿದ್ದು, ಇದರ ಬಗ್ಗೆ ಬುಧವಾರ ರಾಜ್ಯ ಆರೋಗ್ಯ ಇಲಾಖೆ ಪ್ರಕಟಿಸಿದ ಕೋವಿಡ್-19 ಸೋಂಕಿತರ ಪಟ್ಟಿಯಲ್ಲಿ ಮಾಹಿತಿ ನೀಡಲಾಗಿದೆ.

ಕೊರೋನಾ ಪಾಸಿಟಿವ್ ಬಂದವರೆಲ್ಲರೂ ಮಹಾರಾಷ್ಟ್ರದಿಂದ ಬಂದವರಾಗಿದ್ದಾರೆ. ಇವರಲ್ಲಿ 6 ಮಂದಿ ಪುರುಷರು, ಇಬ್ಬರು ಯುವತಿಯರು ಹಾಗೂ ಓರ್ವ ಬಾಲಕ ಸೇರಿದ್ದಾರೆ ಎಂದು ತಿಳಿಸಲಾಗಿದೆ.

error: Content is protected !!

Join the Group

Join WhatsApp Group