ಬೀದರ್ ನಲ್ಲಿ ಕೊರೋನಾಗೆ ಮತ್ತೊಂದು ಬಲಿ ► ರಾಜ್ಯದಲ್ಲಿ ಮೃತರ ಸಂಖ್ಯೆ 45ಕ್ಕೆ ಏರಿಕೆ

(ನ್ಯೂಸ್ ಕಡಬ) newskadaba.com  ಬೀದರ್,ಮೇ 27: ಹೆಮ್ಮಾರಿ ಕೊರೋನಾ ವೈರಸ್ ಬೀದರ್ ಜಿಲ್ಲೆಯಲ್ಲಿ ಮತ್ತೊಂದು ಬಲಿ ಪಡೆದುಕೊಂಡಿದ್ದು, ರಾಜ್ಯದಲ್ಲಿ ಮೃತರ ಸಂಖ್ಯೆ 45ಕ್ಕೆ ಏರಿಯಾಗಿದೆ.  ಬೀದರ್  ವಿದ್ಯಾನಗರ ಕಾಲೋನಿಯ ನಿವಾಸಿ 49 ವರ್ಷದ ವ್ಯಕ್ತಿಗೆ ಮೇ 22ರಂದು ಕೊರೋನಾ ಸೋಂಕು ಪತ್ತೆಯಾಗಿತ್ತು. ಅವರನ್ನು ರೋಗಿ-1712 ಎಂದು ಗುರುತಿಸಲಾಗಿತ್ತು. ಸೋಂಕಿನಿಂದಾಗಿ ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ.

 

 

 

ಮೃತ ವ್ಯಕ್ತಿಯು ಕಿಡ್ನಿ ವೈಫಲ್ಯ ಹಾಗೂ ಗ್ಯಾಂಗ್ರೀನ್ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಕೊರೊನಾಗೆ ಮೂರನೇ ಬಲಿಯಾಗಿದೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮಂಗಳವಾರದ ಬುಲೆಟಿನ್ ಪ್ರಕಾರ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 95ಕ್ಕೆ ಏರಿಕೆಯಾಗಿದೆ.

Also Read  ಭಾರತದ ಆರ್ಥಿಕ ಬೆಳವಣಿಗೆಯನ್ನು ಶ್ಲಾಘಿಸಿದ ಪುಟಿನ್; ಬ್ರಿಕ್ಸ್ ದೇಶಗಳಿಗೆ ಮಾದರಿ ಎಂದ ರಷ್ಯಾ ಅಧ್ಯಕ್ಷ

 

 

 

 

error: Content is protected !!
Scroll to Top