(ನ್ಯೂಸ್ ಕಡಬ) newskadaba.com ಬೆಂಗಳೂರು,ಮೇ.28: ದೇಶಭಕ್ತಿಯ ಅಪರಾಧಕ್ಕಾಗಿ ಭಾರತೀಯ ಮಹಾವಿದ್ಯಾಲಯವೊಂದರ ವಸತಿಗೃಹದಿಂದ ಹೊರದೂಡಲ್ಪಟ್ಟ ಮೊಟ್ಟಮೊದಲ ವಿದ್ಯಾರ್ಥಿ .ಭಾರತದಲ್ಲಿ ವಿದೇಶಿ ಬಟ್ಟೆಗಳಿಗೆ ಬೆಂಕಿಯಿಟ್ಟು ಹೋಳಿ ಆಚರಿಸಿದ ಮೊಟ್ಟಮೊದಲ ಸ್ವದೇಶಾಭಿಮಾನಿ ಸಾವರ್ಕರ್. ದಾಸ್ಯರಕ್ಕಸನ ಎದೆ ಮೆಟ್ಟಲು ಮುಂದಾಗಿದ್ದಕ್ಕೆ ತಾನು ಗಳಿಸಿದ್ದ ಬಿ.ಎ. ಪದವಿಯನ್ನೇ ಕಳೆದುಕೊಂಡ ಮೊಟ್ಟಮೊದಲ ಭಾರತೀಯ ಪದವೀಧರ, ಕ್ರಾಂತಿಕಾರಿ ಚಟುವಟಿಕೆಗಳನ್ನು ನಡೆಸಿದ್ದಕ್ಕಾಗಿ ಬ್ರಿಟಿಷರಿಂದ ‘ಬ್ಯಾರಿಸ್ಟರ್ ಪದವಿ’ಯನ್ನೇ ನಿರಾಕರಿಸಲ್ಪಟ್ಟ ಮೊಟ್ಟ ಮೊದಲ ಬ್ಯಾರಿಸ್ಟರ್, ಪ್ರಕಟಣೆಗೆ ಮೊದಲೇ ಎರಡು ರಾಷ್ಟ್ರಗಳಲ್ಲಿ ನಿಷೇಧಿಸಲ್ಪಟ್ಟ ಗ್ರಂಥ ರಚಿಸಿದ ಜಗತ್ತಿನ ಮೊಟ್ಟಮೊದಲ ಲೇಖಕ ಸಾವರ್ಕರ್.’ಸಂಪೂರ್ಣ ಸ್ವಾತಂತ್ರ್ಯವೇ ಭಾರತದ ಧ್ಯೇಯ’ ಎಂದು ಘೋಷಿಸಿದ ಮೊಟ್ಟಮೊದಲ ರಾಜಕೀಯ ಮುಂದಾಳು,.ಜಗತ್ತಿನ ರಾಜಕೀಯ ಇತಿಹಾಸದಲ್ಲೇ ಹೇಗ್ ಅಂತರರಾಷ್ಟ್ರೀಯ ನ್ಯಾಯಾಲಯದೆದುರು ತನ್ನ ಬಗ್ಗೆ ಮೊಕದ್ದಮೆ ನಡೆಯುವಂತೆ ಮಾಡಿದ ಮೊದಲ ರಾಜಕೀಯ ಖೈದಿ. ವಿಶ್ವದ ಚರಿತ್ರೆಯಲ್ಲಿ 50 ವರ್ಷಗಳ ಕರಿನೀರಿನ ಶಿಕ್ಷೆಗೆ ಗುರಿಯಾದ ಮೊಟ್ಟ ಮೊದಲ ಸ್ವಾತಂತ್ರ್ಯ ಸೇನಾನಿ ಸಾವರ್ಕರ್ .
ಸ್ವಾತಂತ್ರ್ಯ ಹೋರಾಟಗಾರ , ಅಖಂಡ ದೇಶ ಪ್ರೇಮದ ಅಸ್ಮಿತೆಯ ಸಂಕೇತ, ಪ್ರಖರ ವಾಗ್ಮಿ ದಿವಂಗತ ವಿನಾಯಕ ದಾಮೋದರ ಸಾವರ್ಕರ್ ಅವರ ಜಯಂತಿಯಿಂದು, ಅವರಿಗೆ ನಮಿಸೋಣ ಎಂದು ಮುಖ್ಯಮಂತ್ರಿ ಬಿ.ಎಸ್ ಯುಡಿಯೂರಪ್ಪ ತಿಳಿಸಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ಬಿ. ಶ್ರೀರಾಮುಲು, ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಯಣ,ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಟ್ವೀಟ್ ಮಾಡುವ ಮೂಲಕ ವೀರ ಸಾವರ್ಕರ್ ರ ಜಯಂತಿಗೆ ಗೌರವ ನಮನ ಸಲ್ಲಿಸಿದ್ದಾರೆ.