15 ದಿನ ಕೃಷ್ಣನ ದರ್ಶನವಿಲ್ಲ ►ಉಡುಪಿ ಕೃಷ್ಣ ಮಠದಲ್ಲಿ ದೇವರ ದರ್ಶನಕ್ಕೆ ಅವಕಾಶವಿಲ್ಲ

(ನ್ಯೂಸ್ ಕಡಬ) newskadaba.com ಉಡುಪಿ,ಮೇ.28: ರಾಜ್ಯದಲ್ಲಿ ಜೂನ್ 1 ರಿಂದ ದೇವಸ್ಥಾನಗಳಲ್ಲಿ ಭಕ್ತರು ದೇವರ ದರ್ಶನ ಪಡೆಯಬಹುದು ಎಂದು ಸರ್ಕಾರ ಅವಕಾಶ ನೀಡಿದ್ದರೂ ಉಡುಪಿ ಕೃಷ್ಣ ಮಠದಲ್ಲಿ ಇನ್ನೂ 15 ದಿನಗಳ ಕಾಲ ಭಕ್ತರ ದರ್ಶನಕ್ಕೆ ಅವಕಾಶವಿಲ್ಲ ಎಂದು ಪರ್ಯಾಯ ಅದಮಾರು ಮಠ ತಿಳಿಸಿದೆ.ಮಠಾಧೀಶರಾದ ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರು ಮತ್ತು ಶ್ರೀ ಈಶಪ್ರಿಯ ತೀರ್ಥರು ಈ ಬಗ್ಗೆ ಪ್ರಕಟಣೆ ಬಿಡುಗಡೆ ಮಾಡಿದ್ದು, ಮುಂದಿನ 10-15 ದಿನದಲ್ಲಿ ಪರಿಸ್ಥಿಗಳನ್ನು ಅವಲೋಕಿಸಿ, ಮುಂಜಾಗೃತ ಕ್ರಮಗಳನ್ನು ಕೈಗೊಂಡ ಬಳಿಕ  ನಂತರ ಭಕ್ತರ ದರ್ಶನಕ್ಕೆ ಅವಕಾಶ ನೀಡುವುದಾಗಿ ತಿಳಿಸಿದ್ದಾರೆ.

Also Read  ಕಾಣಿಯೂರು: 33 ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಆಚರಣೆ

 

 

ಇತರ ದೇವಸ್ಥಾನಗಳಲ್ಲಿ ದೇವರ ದರ್ಶನ ವ್ಯವಸ್ಥೆ ಕಲ್ಪಿಸಿದರೂ, ಶ್ರೀಕೃಷ್ಣ ಮಠದಲ್ಲಿ ಅಷ್ಟ ಮಠದ ಯತಿಗಳೇ ಪೂಜೆ ನಡೆಸುವ ಕ್ರಮ ಇದೆ. ಹಾಗಾಗಿ ಒಳಗಿನವರಿಗೆ ಏನಾದರೂ ತೊಂದರೆ ಆದರೆ ಪದ್ಧತಿಗೆ ಭಂಗ ಬರುವಂತಹ ಸಂದರ್ಭಗಳು ಇರುತ್ತವೆ. ಹಾಗಾಗಿ ಮುಂದಿನ ದಿನಗಳಲ್ಲಿ ಪರಿಸ್ಥಿತಿ ಅವಲೋಕಿಸಿ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ.

 

 

 

 

 

error: Content is protected !!
Scroll to Top