ಎಲ್ಲೆಂದರಲ್ಲಿ ವಾಹನ ನಿಲ್ಲಿಸುತ್ತಿರುವವರಿಗೆ ಬಿಗ್ ಶಾಕ್ ➤ ಕಡಬ ಪೊಲೀಸರಿಂದ ವಾಹನಗಳ ವ್ಹೀಲ್ ಲಾಕ್..!!

(ನ್ಯೂಸ್ ಕಡಬ) newskadaba.com ಕಡಬ, ಮೇ.29. ರಸ್ತೆಯ ಎಲ್ಲೆಂದರಲ್ಲಿ ಬೇಕಾಬಿಟ್ಟಿಯಾಗಿ ವಾಹನ ನಿಲ್ಲಿಸಿ ತೆರಳಿದವರಿಗೆ ಕಡಬ ಪೊಲೀಸರು ವ್ಹೀಲ್ ಲಾಕ್‌ ಮಾಡುವ ಮೂಲಕ ಶಾಕ್ ನೀಡಿದ್ದಾರೆ.

ಕಡಬ ಪೇಟೆಗೆ ಆಗಮಿಸುತ್ತಿದ್ದ ಕೆಲವರು ವಾಹನಗಳನ್ನು ಬೇಕಾಬಿಟ್ಟಿಯಾಗಿ ರಸ್ತೆಯಲ್ಲೇ ನಿಲ್ಲಿಸಿ ತೆರಳುತ್ತಿದ್ದರು. ಇಂತಹ ವಾಹನಗಳ ಮೇಲೆ ಹದ್ದಿನ ಕಣ್ಣಿಟ್ಟಿರುವ ಕಡಬ ಪೊಲೀಸರು ವ್ಹೀಲ್ ಲಾಕ್ ಮಾಡುವ ಮೂಲಕ ಬಿಸಿ ಮುಟ್ಟಿಸಿದ್ದಾರೆ. ಈ ಮೂಲಕ ಕಡಬ ಪೊಲೀಸರು ಪೇಟೆಯ ಟ್ರಾಫಿಕ್ ಸಮಸ್ಯೆಗೆ ಕೊಂಚ ಮಟ್ಟಿನ ಪರಿಹಾರವನ್ನು ಕಂಡು ಹುಡುಕಿದ್ದಾರೆ.

Also Read  ರಾಜ್ಯ ಬಿಜೆಪಿ ಸಂಘಟನಾ ಕಾರ್ಯದರ್ಶಿಯಾಗಿ ಕಡಬದ ರಾಜೇಶ್ ನೇಮಕ

error: Content is protected !!
Scroll to Top