(ನ್ಯೂಸ್ ಕಡಬ) newskadaba.com ಬೆಂಗಳೂರು,ಸೆ.02, ರಾತ್ರಿಯಿಡೀ ಎಡಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಬೆಂಗಳೂರಿನ ಸಿಲಿಕಾನ್ ಸಿಟಿ ತತ್ತರಿಸಿ ಹೋಗಿದೆ.
ಯಶವಂತಪುರ, ಪೀಣ್ಯ, ಮಲ್ಲೇಶ್ವರಂ, ಮೆಜೆಸ್ಟಿಕ್, ಎಂಜಿ ರೋಡ್, ಶಾಂತಿನಗರ, ವಿಲ್ಸನ್ ಗಾರ್ಡನ್, ಕೋರಮಂಗಲ ಸೇರಿದಂತೆ ರಾಜ್ಯ ರಾಜಧಾನಿಯ ಹಲವೆಡೆ ಬಿಟ್ಟುಬಿಡದೆ ಮಳೆ ಸುರಿಯುತ್ತಿದೆ. ರಸ್ತೆಯ ತುಂಬೆಲ್ಲಾ ಮೊಣಕಾಲುವರೆಗೂ ನೀರು ತುಂಬಿ ಜನ ಜೀವನ ಅಸ್ತವ್ಯಸ್ತ ಗೊಂಡಿದ್ದು, ವಾಹನ ಸಂಚಾರಕ್ಕೆ ತೊಂದರೆಯಾಗಿದೆ. ಮೆಜೆಸ್ಟಿಕ್ ಬಳಿಯ ರೈಲ್ವೆ ಸೇತುವೆಗಳಲ್ಲಿ 4ರಿಂದ 6 ಅಡಿಯಷ್ಟು ನೀರು ನಿಂತುಕೊಂಡಿತ್ತು.
ರಾತ್ರಿಯಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನರು ಮನೆಯಿಂದ ಹೊರಬರಲಾದೆ ತೊಂದರೆ ಅನುಭವಿಸುತ್ತಿದ್ದಾರೆ. ಬೆಂಗಳೂರಿನ ಬಹುತೇಕ ರಸ್ತೆಗಳು ಕೆರೆಗಳಂತೆ ತುಂಬಿ ಕೊಂಡಿದೆ.
ಗುರುವಾರ ರಾತ್ರಿಯಿಂದ ಶುಕ್ರವಾರ ನಸುಕಿನವರೆಗೆ ನಗರದಲ್ಲಿ 72 ಮಿ.ಮೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.