ಜೂ. 15ರವರೆಗೆ ಮೀನುಗಾರಿಕೆಗೆ ಕೇಂದ್ರ ಅಸ್ತು ➤ ಕೋಟ ಶ್ರೀನಿವಾಸ ಪೂಜಾರಿ

(ನ್ಯೂಸ್ ಕಡಬ) newskadaba.com ಮಂಗಳೂರು,ಮೇ.30: ವಿದ್ಯುತ್ ಗ್ರಾಹಕರಿಗೆ ಅಧಿಕ ಬಿಲ್ ಬಂದಿರುವ ಬಗ್ಗೆ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ಸ್ಪಂದಿಸಲು ಮೆಸ್ಕಾಂ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಅವರು ಶುಕ್ರವಾರ ತಮ್ಮ ಕಚೇರಿಯಲ್ಲಿ ಸುದ್ದಿಗಾರರಿಗೆ ಈ ಬಗ್ಗೆ ಮಾಹಿತಿ ನೀಡಿ, ಎರಡು ತಿಂಗಳ ಬಿಲ್ಗಳನ್ನು ಒಟ್ಟಿಗೆ ನೀಡಿದ್ದರೂ, ನಿಗದಿತ ಸರಾಸರಿ ದರಕ್ಕಿಂದ ಹೆಚ್ಚು ಮೊತ್ತದ ಬಿಲ್ ಮೆಸ್ಕಾಂ ನೀಡಿರುವುದರ ಬಗ್ಗೆ ಸಾರ್ವಜನಿಕರ ಅಸಮಾಧಾನ ತನ್ನ ಗಮನಕ್ಕೆ ಬಂದಿದೆ. ಈ ಬಗ್ಗೆ ಈಗಾಗಲೇ ಮೆಸ್ಕಾಂ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ.

 

 

ಶನಿವಾರ ಮತ್ತೊಮ್ಮೆ ಸಭೆ ನಡೆಸಿ, ಗ್ರಾಹಕರಿಗೆ ಅನ್ಯಾಯವಾಗದಂತೆ ಗಮನಹರಿಸಲು ನಿರ್ದೇಶಿಸಲಾಗುವುದು ಎಂದು ಹೇಳಿದರು. ಮೀನುಗಾರಿಕೆ ಅವಧಿಯನ್ನು ಕೇಂದ್ರ ಸರಕಾರ ಜೂನ್ 15ರವರೆಗೆ ವಿಸ್ತರಿಸಿ ಆದೇಶಿಸಿದೆ. ರಾಜ್ಯ ಸರಕಾರವೂ ಇದರನ್ವಯ ಕ್ರಮ ಕೈಗೊಂಡಿದೆ. ಈ ನಿಟ್ಟಿನಲ್ಲಿ ವಿಮಾ ಕಂಪೆನಿ ಸೇರಿದಂತೆ ಸಂಬಂಧಪಟ್ಟವರಿಗೆ ಸೂಕ್ತ ಸೂಚನೆ ನೀಡಲಾಗುವುದು ಎಂದು ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು. ರಾಜ್ಯದಲ್ಲಿ ಒಳನಾಡ ಮೀನುಗಾರಿಕೆ ಅಭಿವೃದ್ಧಿಪಡಿಸಲು ಈಗಾಗಲೇ ಬೆಂಗಳೂರಿನಲ್ಲಿ ಸಭೆ ನಡೆಸಲಾಗಿದೆ. ಮುಂದಿನ 10 ವರ್ಷದಲ್ಲಿ ಮೀನುಮರಿ ಉತ್ಪಾದನೆ ಸೇರಿದಂತೆ ಈ ಕ್ಷೇತ್ರದಲ್ಲಿ ಹೆಚ್ಚಿನ ಪ್ರಗತಿಗೆ ಕಾರ್ಯಯೋಜನೆ ರೂಪಿಸಲಾಗುವುದು ಎಂದು ಸಚಿವರು ಹೇಳಿದರು.

Also Read  ಸಿ.ಟಿ ರವಿ ಪ್ಲೆಕ್ಸ್ ಹರಿದು ಹಾಕಿದ ಕಿಡಿಗೇಡಿಗಳು

 

 

 

 

error: Content is protected !!
Scroll to Top