ನಿಗದಿತ ವೇಳಾಪಟ್ಟಿಯಂತೆಯೇ ಎಸ್ಸೆಸ್ಸೆಲ್ಸಿ ಪರೀಕ್ಷೆ ➤ ಸಚಿವ ಸುರೇಶ್ ಕುಮಾರ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.30, ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್ ತಕರಾರು ಅರ್ಜಿಯನ್ನು ಇತ್ಯರ್ಥಪಡಿಸಿರುವುದರಿಂದ ಇದೀಗ ಪರೀಕ್ಷೆ ನಡೆಸಲು ಯಾವುದೇ ಅಡ್ಡಿಯಿಲ್ಲ, ನಿಗದಿತ ವೇಳಾಪಟ್ಟಿಯಂತೆ ಪರೀಕ್ಷೆ ನಡೆಯಲಿದೆ ಎಂದು ಶಿಕ್ಷಣ ಸಚಿವ ಎಸ್‌.ಸುರೇಶ್‍ ಕುಮಾರ್ ಹೇಳಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪರೀಕ್ಷೆ ನಡೆಸುವುದರಲ್ಲಿ ಯಾವುದೇ ವಿವಾದವಿಲ್ಲ. ಕೆಲವರು ಉದ್ದೇಶಪೂರ್ವಕವಾಗಿ ವಿವಾದ ಸೃಷ್ಟಿಸುತ್ತಿದ್ದಾರೆ. ಪರೀಕ್ಷೆ ನಡೆಸದೆ ರಾಜ್ಯದ 8.5 ಲಕ್ಷ ವಿದ್ಯಾರ್ಥಿಗಳನ್ನು ಉತ್ತೀರ್ಣ ಮಾಡಲು ಸಾಧ್ಯವಿಲ್ಲ, ಹೀಗಾಗಿ ಪರೀಕ್ಷೆ ಅನಿವಾರ್ಯ’ ಎಂದರು. ಈ ಮಧ್ಯೆ ಸಚಿವರು ರಾಜ್ಯದ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಪತ್ರ ಬರೆದಿದ್ದು, ಎಸ್ಸೆಸ್ಸೆಲ್ಲಿ ಪರೀಕ್ಷೆಗಳನ್ನು ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಹಿತದೃಷ್ಟಿಯಿಂದ ಸುರಕ್ಷಿತವಾಗಿ ಮತ್ತು ಯಶಸ್ವಿಯಾಗಿ ಮಾಡಿ ಮುಗಿಸಲು ಸಹಕರಿಸಬೇಕು ಎಂದು ವಿನಂತಿಸಿದ್ದಾರೆ.

Also Read  ಸುಳ್ಯ: ಪಕ್ಷವಿರೋಧಿ ಚಟುವಟಿಕೆಯ ಹಿನ್ನೆಲೆ ➤ 6 ವರ್ಷಗಳ ಕಾಲ ಬಿಜೆಪಿಯ ನಾಲ್ವರು ನಾಯಕರ ವಜಾ

ಪಿಯು ಮೌಲ್ಯಮಾಪನ: ದ್ವಿತೀಯ ಪಿಯು ಇಂಗ್ಲಿಷ್‌ ಪತ್ರಿಕೆಯ ಪರೀಕ್ಷೆ ಜೂನ್‌ 18ರಂದು ನಡೆಯಲಿದ್ದು, ಅದರ ಮೌಲ್ಯಮಾಪನವನ್ನು ಆಯಾ ಜಿಲ್ಲೆಗಳಲ್ಲೇ ನಡೆಸಲಾಗುವುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ.

error: Content is protected !!
Scroll to Top