ಜೂನ್ 15 ರಿಂದ ಮೀನುಗಾರಿಕೆ ನಿಷೇಧ ➤ ಪರಿಷ್ಕೃತ ಆದೇಶ ಪ್ರಕಟ

(ನ್ಯೂಸ್ ಕಡಬ) newskadaba.com ಉಡುಪಿ, ಮೇ .30: ಕರ್ನಾಟಕ ಕರಾವಳಿ ಮೀನುಗಾರಿಕೆ ನಿಯಂತ್ರಣ ಕಾಯ್ದೆ, ಹಾಗೂ ಕರ್ನಾಟಕ ಸರ್ಕಾರದ ಮೇ 29 ರ ಅಧಿಸೂಚನೆ ಯಂತೆ, ಉಡುಪಿ ಜಿಲ್ಲೆಯನ್ನು ಸೇರಿದಂತೆ ಕರ್ನಾಟಕದ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು / ಸಾಧನಗಳನ್ನು ಉಪಯೋಗಿಸಿ ಎಲ್ಲಾ ಯಾಂತ್ರೀಕೃತ ದೋಣಿಗಳ ಮುಖಾಂತರ ಹಾಗೂ 10 ಅಶ್ವಶಕ್ತಿ (ಹೆಚ್.ಪಿ) ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಇನ್ಬೋರ್ಡ್ ಅಥವಾ ಔಟ್ಬೋರ್ಡ್ ಯಂತ್ರಗಳನ್ನು ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳ ಮುಖಾಂತರ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಯ ನಿಷೇಧವನ್ನು ಪ್ರಸಕ್ತ ವರ್ಷಕ್ಕೆ ಮಾತ್ರ ಅನ್ವಯಿಸುವಂತೆ ಜೂನ್ 15 ರಿಂದ ಜುಲೈ 31 ರವರೆಗೆ (ಉಭಯ ದಿನಗಳು ಸೇರಿ) ಒಟ್ಟು 47 ದಿನಗಳಿಗೆ ಪರಿಷ್ಕರಿಸಿ ಆದೇಶ ಹೊರಡಿಸಿದೆ.

Also Read  ಎಚ್ಐವಿ, ಏಡ್ಸ್ ಬಗ್ಗೆ ಅರಿವು ಮೂಡಿಸಲು ಸೆಪ್ಟೆಂಬರ್ 8ರಂದು ಮ್ಯಾರಥಾನ್ ಸ್ಪರ್ಧೆ

 

ದೋಣಿಯನ್ನು ಸಾಗಿಸುವ ಉದ್ದೇಶಕ್ಕಾಗಿ 10 ಅಶ್ವಶಕ್ತಿಯ ವರೆಗಿನ ಸಾಮರ್ಥ್ಯದ ಮೋಟರೀಕೃತ ದೋಣಿ ಹಾಗೂ ಸಾಂಪ್ರದಾಯಕ / ನಾಡದೋಣಿಗಳು ಕರಾವಳಿ ಮೀನುಗಾರಿಕೆಯನ್ನು ಕೈಗೊಳ್ಳಲು ಅನುಮತಿಸಿದೆ.ಮೀನುಗಾರಿಕೆ ನಿಷೇದಿಸಿದ ಸರ್ಕಾರದ ಸದರಿ ಆದೇಶವನ್ನು ಉಲ್ಲಂಘಿಸುವ ಮೀನುಗಾರಿಕಾ ದೋಣಿಗಳು ಮತ್ತು ಮೀನುಗಾರರು ಕರ್ನಾಟಕ ಕಡಲ ಮೀನುಗಾರಿಕೆ ಕಾಯ್ದೆ-1986ರಲ್ಲಿ ವಿಧಿಸಲಾಗಿರುವ ದಂಡನೆಗಳಿಗೆ ಹೊಣೆಯಾಗುವುದಲ್ಲದೇ ಒಂದು ವರ್ಷದ ಅವಧಿಗೆ ಡೀಸೆಲ್ ಮೇಲಿನ ಸಹಾಯಧನ ಪಡೆಯಲು ಅನರ್ಹರಾಗುತ್ತಾರೆ. ಈ ಆದೇಶವನ್ನು ಕರಾವಳಿ ಪ್ರದೇಶದ ಎಲ್ಲಾ ಮೀನುಗಾರರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಹೊರಡಿಸಲಾಗಿರುವುದರಿಂದ ಎಲ್ಲಾ ಮೀನುಗಾರರು ಈ ಆದೇಶವನ್ನು ಪಾಲಿಸಿ ಸರ್ಕಾರದೊಂದಿಗೆ ಸಹಕರಿಸುವಂತೆ ತಿಳಿಸಲಾಗಿದೆ.

 

 

 

error: Content is protected !!
Scroll to Top