ಇಂದು ಬೆಳಿಗ್ಗೆ 11 ಗಂಟೆಗೆ ಮೋದಿ ಅವರ ಮನ್‌‌ ಕೀ ಬಾತ್‌‌

(ನ್ಯೂಸ್ ಕಡಬ) newskadaba.com ನವದೆಹಲಿ,ಮೇ.31: ದೇಶಾದ್ಯಂತ 4ನೇ ಹಂತದ ಲಾಕ್ಡೌನ್ನ ಕೊನೆಯ ದಿನವಾದ ಇಂದು ಬೆಳಗ್ಗೆ 11 ಗಂಟೆಗೆ ಪ್ರಧಾನಿ ಮೋದಿ ಅವರು ಮನ್ ಕೀ ಬಾತ್ ಮೂಲಕ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ.ಪ್ರಧಾನಿ ಮೋದಿ ಅವರ ನೇತೃತ್ವದ ಸರ್ಕಾರ ಎರಡನೇ ಬಾರಿ ಅಧಿಕಾರಕ್ಕೇರಿ ಶನಿವಾರ ಒಂದು ವರ್ಷ ಪೂರೈಸಿದ್ದು, ಇದರ ಬೆನ್ನಲ್ಲೇ ಮನ್ ಕೀ ಬಾತ್ನ 65ನೇ ಸಂಚಿಕೆ ಇಂದು ಪ್ರಸಾರವಾಗಲಿದೆ.

 

ಎರಡು ತಿಂಗಳಿನಿಂದ ಲಾಕ್ಡೌನ್ ಜಾರಿಯಲ್ಲಿದ್ದು ಜೂನ್ 1ರಿಂದ ಲಾಕ್ಡೌನ್ ಸಡಿಲಿಕೆ ಆಗಲಿದೆ. ಈ ಬಗ್ಗೆ ಪ್ರಧಾನಿ ಮೋದಿ ಅವರು ಮನ್ ಕೀ ಬಾತ್ನಲ್ಲಿ ಮಾತನಾಡಲಿದ್ದಾರೆ ಎನ್ನುವ ನಿರೀಕ್ಷೆ ಇದೆ.ಕೊರೊನಾ ವೈರಸ್ ವ್ಯಾಪಿಸುವುದನ್ನು ನಿಯಂತ್ರಿಸುವ ಸಲುವಾಗಿ ಮಾರ್ಚ್ 24ರಂದಯ ಲಾಕ್ಡೌನ್ ಘೋಷಣೆಯಾಗಿದ್ದು, ಬಳಿಕ ಅದನ್ನು ಮೇ 31ರವರಗೆ ವಿಸ್ತರಣೆ ಮಾಡಲಾಗಿತ್ತು.

Also Read  ಕರ್ನಾಟಕ ಸೇರಿ ದೇಶದ 9 ರಾಜ್ಯಗಳಿಗೆ ವಂದೇ ಭಾರತ್ ಎಕ್ಸ್‌ಪ್ರೆಸ್‌ - ಪ್ರಧಾನಿಯಿಂದ ಗ್ರೀನ್ ಸಿಗ್ನಲ್

 

error: Content is protected !!
Scroll to Top