(ನ್ಯೂಸ್ ಕಡಬ) newskadaba.com ತುಮಕೂರು,ಮೇ.31: SSLC ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಸರ್ವ ಸನ್ನದ್ಧವಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಡ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದರು. ನಗರದ ಜಿಲ್ಲಾ ಪಂಚಾಯತ್ ಕಛೇರಿಯಲ್ಲಿ ತುಮಕೂರು ಹಾಗೂ ಮಧುಗಿರಿ ಶೈಕ್ಷಣಿಕ ಜಿಲ್ಲೆಗಳ ಅಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಪರಿಕ್ಷಾ ಕೇಂದ್ರ ಗಳಲ್ಲಿ ಯಾವುದೇ ರೀತಿಯ ಗೊಂದಲ ಉಂಟಾಗ ಬಾರದು ರಾಜ್ಯದಲ್ಲಿ ಪರೀಕ್ಷೆ ಬರೆಯುವ ಮಕ್ಕಳಿಗೆ ಮಾಸ್ಕ್ಗಳನ್ನು ನೀಡಲು ಈಗಾಗಲೇ ಎಂಟುವರೆ ಲಕ್ಷ ಮಾಸ್ಕ್ ಗಳನ್ನು ನೀಡಲು ಮುಂದೆ ಬಂದಿದ್ದಾರೆ ಎಂದರು.
ಈಗಾಗಲೇ, ರೆಡ್ ಕಾಸ್ ಸಂಸ್ಥೆ, ಬೆಂಗಳೂರಿನ ರಾಮಕೃಷ್ಣ ಆಶ್ರಮ, ಪಾವಗಡದ ಜಪಾನಂದ ಸ್ವಾಮಿಯವರು, ವಾಶ್ ಮಾಡುವ ಮಾಸ್ಕ್ಗಳನ್ನು ತಯಾರು ಮಾಡಲಾಗಿದೆ. ಅಲ್ಲದೆ ರಾಜ್ಯದ ಪರೀಕ್ಷಾ ಕೇಂದ್ರಗಳನ್ನು ಸ್ಯಾನಿಟೈಸ್ ಮಾಡಲು ಎಲïಅಂಡ್ಟಿ , ಎಂಎಸ್ಸಿ ಸೇರಿದಂತೆ ಹಲವು ಮಂದಿ ಮುಂದೆ ಬಂದಿದ್ದಾರೆ ಇದು ಹೆಮ್ಮೆಯ ಸಂಗತಿ ಎಂದರು. ಪ್ರತಿ ಶಾಲೆಯ ಪರೀಕ್ಷಾ ಕೇಂದ್ರಗಳಲ್ಲಿ ಥರ್ಮಲ್ ಸ್ಕಾನರ್ ನಡೆಸಲು ಕ್ರಮ ಕೈಗೊಳ್ಳಲಾಗಿದೆ. ಒಂದು ವೇಳೆ ಪರೀಕ್ಷೆ ನಡೆಯುವ ಸಂದರ್ಭದಲ್ಲಿ ಮಗುವಿಗೆ ಏನಾದರೂ ಅನಾರೋಗ್ಯ ಕಂಡು ಬಂದರೆ ಮಗುವಿಗೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆಗೆ ಸಿದ್ದತೆ ನಡೆಸಲು ಅಕಾರಿಗಳಿಗೆ ಸೂಚಿಸಿದರು.ಮುಖ್ಯವಾಗಿ ಪರೀಕ್ಷಾ ಕೇಂದ್ರಗಳಲ್ಲಿ ಕುಡಿಯುವ ನೀರು, ಶೌಚಾಲಯದ ವ್ಯವಸ್ಥೆ, ಸ್ವಚ್ಚತೆ ಹೆಚ್ಚು ಆದ್ಯತೆ ನೀಡಬೇಕು, ಸಾಧ್ಯವಾದಷ್ಟು ಮಕ್ಕಳು ಕುಡಿಯುವ ನೀರನ್ನು ತರಲು ಹೇಳಿ ಎಂದರು.