(ನ್ಯೂಸ್ ಕಡಬ) newskadaba.com ಬೆಂಗಳೂರು ,ಮೇ.31: ಕೊರೊನಾ ಲಾಕ್ಡೌನ್ 5.0ನಲ್ಲಿ ಕೇಂದ್ರ ಸರ್ಕಾರವು ದೇವಾಲಯ ತೆರೆಯಲು ಅನುಮತಿ ನೀಡಿದೆ. ಹೀಗಾಗಿ ಜೂನ್ 8ರಿಂದ ದೇವಾಲಯ ತೆರೆಯಲಿದ್ದು, ಮುಂಜಾಗ್ರತಾ ಕ್ರಮವಾಗಿ ರಾಜ್ಯ ಸರ್ಕಾರ ಎಂಟು ಸೂತ್ರಗಳನ್ನು ಹೊರಡಿಸಿದೆ. ಈ ಕುರಿತು ಪ್ರಕಟಣೆ ಹೊರಡಿಸಿರುವ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯು, ರಾಜ್ಯದಲ್ಲಿ ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೆಲವು ಮುಂಜಾಗ್ರತಾ ಕ್ರಮಗಳು ಅಗತ್ಯವಾಗಿದೆ. ಸರ್ಕಾರವು ಮುಂಬರುವ ದಿನಗಳಲ್ಲಿ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ದೇವಾಲಯಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆಯಲು ಭಕ್ತರಿಗೆ ಅವಕಾಶ ಕಲ್ಪಿಸಬಹುದು. ಹೀಗಾಗಿ ದೇವಾಲಯಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಕೊಳ್ಳಬೇಕಿದೆ ಎಂದು ತಿಳಿಸಿದೆ.
ಎಂಟು ನಿಯಮಗಳು ಏನು?
1. ನಿತ್ಯ ಸ್ವಚ್ಛತೆ ಜೊತೆಗೆ ಒಳಗೆ-ಹೊರಗೆ ಡಿಸ್ ಇನ್ಫೆಕ್ಟರ್ ಸಿಂಪಡಣೆ ಕಡ್ಡಾಯ.
2. ಭದ್ರತಾ ಸಿಬ್ಬಂದಿಯನ್ನು ಎರಡು ಪಾಳಿಯಲ್ಲಿ ದೇವಾಲಯದ ಖರ್ಚಿನಲ್ಲೇ ನೇಮಿಸಿ.
3. ದೇವಾಲಯದ ಎಲ್ಲಾ ಸಿಬ್ಬಂದಿಗೂ ಮಾಸ್ಕ್ ಕಡ್ಡಾಯ, ಒಳಾಂಗಣದಲ್ಲಿ ಅರ್ಚಕರಿಗೆ ಮಾಸ್ಕ್ ವಿನಾಯಿತಿ.
4. ಥರ್ಮಲ್ ಸ್ಕ್ರೀನಿಂಗ್ ಪರೀಕ್ಷೆ, ಸ್ಯಾನಿಟೈಸರ್ ಹಾಕಿದ ನಂತರವೇ ದೇವಸ್ಥಾನಕ್ಕೆ ಎಂಟ್ರಿ.
5. ಥರ್ಮಲ್ ಸ್ಕ್ರೀನಿಂಗ್ನಲ್ಲಿ ಜ್ವರ ಪತ್ತೆಯಾದರೆ ದೇವಸ್ಥಾನಕ್ಕೆ ನೋ ಎಂಟ್ರಿ.
6. ಮಾಸ್ಕ್ ಧರಿಸದ ಭಕ್ತಾದಿಗಳಿಗೆ ದೇವಸ್ಥಾನ ಪ್ರವೇಶವಿಲ್ಲ.
7. ಸಾಮಾಜಿಕ ಅಂತರ ಕಾಪಾಡಲು ಬಾಕ್ಸ್, ಲೈನ್ ರೂಪಿಸುವುದು ಕಡ್ಡಾಯ.
8. ದೇವಸ್ಥಾನದ ಶೌಚಾಲಯ ಆಗಾಗ ಸ್ವಚ್ಛಗೊಳಿಸಿ, ಅಗತ್ಯ ಡಿಸ್ ಇನ್ಫೆಂಕಟರ್ ಸಿಂಪಡಿಸಬೇಕು.