ದಚ್ಚು ಅಭಿಮಾನಿಗಳಿಗೆ ಸಿಹಿ ಸುದ್ದಿ ➤ ‘ರಾಜವೀರ ಮದಕರಿನಾಯಕ’ ಚಿತ್ರೀಕರಣಕ್ಕೆ ಪ್ಲಾನ್

(ನ್ಯೂಸ್ ಕಡಬ) newskadaba.com ಸಿನೆಮಾ ಸುದ್ದಿ: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ರಾಜವೀರ ಮದಕರಿ ನಾಯಕ’ ಚಿತ್ರೀಕರಣಕ್ಕೆ ಚಿತ್ರತಂಡ ತಯಾರಿ ನಡೆಸಿದ್ದು ಬೆಂಗಳೂರಿನಲ್ಲಿಯೇ ಚಿತ್ರೀಕರಣಕ್ಕೆ ಪ್ಲಾನ್ ಮಾಡಿಕೊಳ್ಳಲಾಗಿದೆ. ಈಗಾಗಲೇ ಕೇರಳದಲ್ಲಿ 20 ದಿನಗಳ ಚಿತ್ರೀಕರಣ ಮುಗಿಸಿದ್ದು ಐತಿಹಾಸಿಕ ಚಿತ್ರದ ಎರಡನೇ ಹಂತದ ಚಿತ್ರೀಕರಣ ರಾಜಸ್ಥಾನದಲ್ಲಿ ನಡೆಯಬೇಕಿತ್ತು. ಲಾಕ್ಡೌನ್ ಕಾರಣದಿಂದ ರಾಜಸ್ಥಾನದ ಬದಲಿಗೆ ಬೆಂಗಳೂರು ಮತ್ತು ಸುತ್ತಮುತ್ತ ಚಿತ್ರೀಕರಣಕ್ಕೆ ಪ್ಲ್ಯಾನ್ ಮಾಡಿಕೊಳ್ಳಲಾಗಿದೆ.

 

 

 

ಸರ್ಕಾರದಿಂದ ಚಿತ್ರೀಕರಣಕ್ಕೆ ಅನುಮತಿ ನೀಡುತ್ತಿದ್ದಂತೆ ಬೆಂಗಳೂರು ಸುತ್ತಮುತ್ತ ಶೂಟಿಂಗ್ ನಡೆಸಲಾಗುವುದು. ಚಿತ್ರದ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಮತ್ತು ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಯೋಜನೆಯ ಪ್ರಕಾರ ಈಗಾಗಲೇ ಚಿತ್ರತಂಡ ಸಿದ್ಧತೆ ಮಾಡಿಕೊಂಡಿದ್ದು, ಅನುಮತಿ ಸಿಗುತ್ತಿದ್ದಂತೆ ಬೆಂಗಳೂರಿನಲ್ಲಿ ಸುತ್ತಮುತ್ತಲಿನ ಸ್ಥಳಗಳಲ್ಲಿ ಚಿತ್ರೀಕರಣಕ್ಕೆ ಸಿದ್ಧತೆ ನಡೆಸಲಾಗಿದೆ.

Also Read  ಹೊಸಮಠ ಪ್ರಾ.ಕೃ.ಪ. ಸಹಕಾರಿ ಸಂಘದ ಮಹಾಸಭೆ ► ಹಿಂದಿನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯವರ ಅವ್ಯವಹಾರ ಬಯಲಿಗೆ

 

error: Content is protected !!
Scroll to Top