ಪುತ್ತೂರು: ಕಾರು, ಟಿಪ್ಪರ್ ಮುಖಾಮುಖಿ ಡಿಕ್ಕಿ ➤ ಏರ್ ಬಲೂನ್ ನಿಂದ ಕಾರು ಚಾಲಕ ಪಾರು..!!!

(ನ್ಯೂಸ್ ಕಡಬ) newskadaba.com ಪುತ್ತೂರು,ಜೂನ್.01., ಕಾರು ಹಾಗೂ ಡಿಪ್ಪರ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಮಾಣಿ, ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮುರ ಎಂಬಲ್ಲಿ ಸೋಮವಾರ ನಡೆದಿದೆ.

ಪುತ್ತೂರಿಂದ ಮಂಗಳೂರಿಗೆ ತೆರಳುತ್ತಿದ್ದ ಕಾರು ಹಾಗೂ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಟಿಪ್ಪರ್ ನಡುವೆ ಡಿಕ್ಕಿ ಸಂಭವಿಸಿದ್ದು, ಎರಡೂ ವಾಹನಗಳಿಗೂ ಹಾನಿಯಾಗಿದೆ.

ಅಪಘಾತ ಸಮಯದಲ್ಲಿ ಕಾರಿನ ಏರ್ ಬೆಲೂನ್ ಓಪನ್ ಆದ ಕಾರಣ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಸಂಚಾರ ಠಾಣಾ ಪೊಲೀಸರು ತೆರಳಿರುವುದಾಗಿ ಮಾಹಿತಿ ದೊರಕಿದೆ.

Scroll to Top