ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿಗೆ ಸೋಂಕು ದೃಢ ➤ ಕಾರ್ಕಳದಲ್ಲಿ ಹೆಚ್ಚಿದ ಆತಂಕ

(ನ್ಯೂಸ್ ಕಡಬ) newskadaba.com ಕಾರ್ಕಳ,ಜೂ.1: ಕಾರ್ಕಳ ತಾಲೂಕಿನ ಬೆಳ್ಮಣ್ ಪೆರಲ್ಪಾದೆ ಎಂಬಲ್ಲಿ ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿಯೋರ್ವನಿಗೆ ಕೋವಿಡ್-19 ಸೋಂಕು ದೃಢವಾಗಿದೆ. ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆ ಸೇರಿದ ಇವರಿಗೆ ಕೋವಿಡ್-19 ಸೋಂಕು ತಾಗಿರುವುದು ಪತ್ತೆಯಾಗಿದೆ. ಮಹಾರಾಷ್ಟ್ರದಿಂದ ಗುಂಪಿನೊಂದಿಗೆ ಬಂದಿದ್ದ ಇವರು ನಂದಳಿಕೆಯಲ್ಲಿ ಸರಕಾರಿ ಕ್ವಾರಂಟೈನ್ ನಲ್ಲಿದ್ದರು. ಆದರೆ ಇವರಿಗೆ ಉಸಿರಾಟದ ಸಮಸ್ಯೆ ಕಂಡುಬಂದ ಹಿನ್ನಲೆಯಲ್ಲಿ ಮರುದಿನವೇ ಆಸ್ಪತ್ರೆಗೆ ದಾಖಲಿಸಲಾಗಿತ್ತು.

 

ಸದ್ಯ ಆತನ ಗಂಟಲು ದ್ರವ ಪರೀಕ್ಷೆ ವರದಿ ಬಂದಿದ್ದು, ಕೋವಿಡ್-19 ಸೋಂಕು ತಾಗಿರುವುದು ದೃಢವಾಗಿದೆ. ಇವರೊಂದಿಗೆ ಮಹಾರಾಷ್ಟ್ರದಿಂದ ಬಂದಿದ್ದ ಇತರರು ಸಾಂಸ್ಥಿಕ ಕ್ವಾರಂಟೈನ್ ನಲ್ಲಿ ಇದ್ದಾರೆ.ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೋವಿಡ್-19 ಸೋಂಕಿನ ಸಂಖ್ಯೆ ಏರುತ್ತಲೇ ಇದೆ. ರವಿವಾರ ಜಿಲ್ಲೆಯಲ್ಲಿ ಹತ್ತು ಹೊಸ ಕೋವಿಡ್-19 ಸೋಂಕು ಪ್ರಕರಣ ದೃಢವಾಗಿದೆ. ಇದರಿಂದ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 187ಕ್ಕೆ ಏರಿಕೆಯಾಗಿದೆ.

Also Read  ರಸ್ತೆ ಅಪಘಾತ: ಮಗು-ಚಾಲಕನಿಗೆ ಗಾಯ

 

 

 

error: Content is protected !!
Scroll to Top