ಬೆಳ್ತಂಗಡಿ: ವಿದ್ಯುತ್ ಶಾಕ್ ಗೆ ಎಸಿ ಮೆಕ್ಯಾನಿಕ್ ಬಲಿ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜೂ.02. ವಿದ್ಯುತ್ ಆಘಾತಕ್ಕೆ ಒಳಗಾಗಿ ಎಸಿ ಮೆಕ್ಯಾನಿಕ್ ಓರ್ವರು ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ಸೋಮವಾರ ಸಂಜೆ ನಡೆದಿದೆ.

ಮೃತರನ್ನು ಉಜಿರೆಯಲ್ಲಿ ಎ.ಸಿ ಮೆಕ್ಯಾನಿಕ್ ಮಳಿಗೆ ನಡೆಸುತ್ತಿದ್ದ ಅತ್ತಾಜೆ ನಿವಾಸಿ ಮುಹಮ್ಮದ್ ಸಿರಾಜುದ್ದೀನ್ ಎಂದು ಗುರುತಿಸಲಾಗಿದೆ. ಮೃತರು ಸೋಮವಾರದಂದು ಕಕ್ಕಿಂಜೆಯ ಮನೆಯೊಂದರಲ್ಲಿ ಎಸಿ ದುರಸ್ತಿ ಮಾಡುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ತಕ್ಷಣವೇ ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ಕರೆತರಲಾಯಿತಾದರೂ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ.

Scroll to Top