(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ.02: ಶಾಲೆ ಆರಂಭದ ಕುರಿತು ಜೂನ್ 10-12 ರ ಅವಧಿಯಲ್ಲಿ ಪೋಷಕರಿಂದ ಅಭಿಪ್ರಾಯ ಸಂಗ್ರಹಿಸಲು ಸರ್ಕಾರ ನಿರ್ಧರಿಸಿದೆ. ಶಿಕ್ಷಣ ಸಚಿವ ಸುರೇಶ್ ಕುಮಾರ್ ಈ ಕುರಿತು ಮಾಹಿತಿ ನೀಡಿ, ಕೇಂದ್ರ ಸರ್ಕಾರದ ಗೃಹ ಮಂತ್ರಾಲಯವು ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮಾರ್ಗಸೂಚಿ ಹೊರಡಿಸಿ ಶಾಲೆಗಳು ಮತ್ತು ಶಿಕ್ಷಣ ಸಂಸ್ಥೆಗಳನ್ನು ಪುನರಾರಂಭ ಮಾಡುವ ಕುರಿತು ಸೂಚನೆ ನೀಡಿದೆ ಎಂದು ತಿಳಿಸಿದ್ದಾರೆ.ಕೇಂದ್ರದ ಸೂಚನೆಯಂತೆ ಶಾಲೆಗಳನ್ನು ಆರಂಭಿಸುವ ಕುರಿತಾಗಿ ರಾಜ್ಯ ಸರ್ಕಾರಗಳು ಪೋಷಕರ ಅಭಿಪ್ರಾಯ, ಸಲಹೆ ಪಡೆಯಬೇಕಿದೆ. ಜುಲೈ ನಂತರ ಆರಂಭಿಸಲು ಶಾಲೆ, ಕಾಲೇಜ್, ಶಿಕ್ಷಣ ಸಂಸ್ಥೆ, ಕೋಚಿಂಗ್ ಸೆಂಟರ್, ತರಬೇತಿ ಸಂಸ್ಥೆಗಳ ಆರಂಭಕ್ಕೆ ಮೊದಲು ಪೋಷಕರ ಅಭಿಪ್ರಾಯ ಪಡೆದು ಕ್ರಮಕೈಗೊಳ್ಳಲು ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಲಾಗಿದೆ.ಈ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಆಯುಕ್ತರು, ಸಮಗ್ರ ಶಿಕ್ಷಣದ ರಾಜ್ಯ ಯೋಜನಾ ನಿರ್ದೇಶಕರು ಹಾಗೂ ಇತರೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದು, ರಾಜ್ಯದಲ್ಲಿ ಹಂತ ಹಂತವಾಗಿ ಶಾಲೆಗಳನ್ನು ಪುನರಾರಂಭಿಸುವುದಕ್ಕೆ ಸಂಬಂಧಿಸಿದಂತೆ ಪೋಷಕರು ಮತ್ತು ಸಂಬಂಧಿಸಿದ ಪಾಲುದಾರರ ಸಭೆಗಳನ್ನು ಪ್ರತಿ ಶಾಲೆಯ ಮಟ್ಟದಲ್ಲಿ ಆಯೋಜಿಸುವಂತೆ ತೀರ್ಮಾನಿಸಲಾಗಿದೆ.
ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಮತ್ತು ಅನುದಾನ ರಹಿತ (ಖಾಸಗಿ) ಪ್ರಾಥಮಿಕ, ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಮುಖ್ಯೋಪಾಧ್ಯಾಯರು ಜೂನ್ 10 ರಿಂದ 12 ರ ಅವಧಿಯಲ್ಲಿ ಪೋಷಕರು ಮತ್ತು Sಆಒಅ ಸದಸ್ಯರನ್ನು ಸಭೆಗೆ ಆಹ್ವಾನಿಸಿ ಅಭಿಪ್ರಾಯ ಪಡೆಯಲು ಸೂಚಿಸಲಾಗಿದೆ. ಶಾಲೆಗಳನ್ನು ಪುನರಾರಂಭ ಮಾಡಬಹುದಾದ ದಿನಾಂಕ ಕುರಿತು, ಶಾಲೆಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ವಿಧಾನದ ಬಗ್ಗೆ, ಶಾಲೆಗಳಲ್ಲಿ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳ ಬಗ್ಗೆ ಅಭಿಪ್ರಾಯ ಪಡೆಯಲು ತಿಳಿಸಲಾಗಿದೆ. ರಾಜ್ಯದ ಎಲ್ಲಾ ಪೋಷಕರು ಮತ್ತು Sಆಒಅ ಸದಸ್ಯರು ಈ ಸಭೆಗಳಲ್ಲಿ ಪಾಲ್ಗೊಂಡು ತಮ್ಮ ಅಭಿಪ್ರಾಯ ತಿಳಿಸಬೇಕೆಂದು ಸಚಿವ ಸುರೇಶ್ ಕುಮಾರ್ ಮನವಿ ಮಾಡಿದ್ದಾರೆ.